ಬೆಂಗಳೂರು: ಬೆಲೆ ಏರಿಕೆ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ತಾಕತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು ಹಾಕಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರದಲ್ಲಿ ತಮ್ಮದೇ ಪಕ್ಷ ಆಡಳಿತ ನಡೆಸುತ್ತಿದ್ದು, ಮೋದಿ ನೇತೃತ್ವದ ಸರ್ಕಾರ ಪೆಟ್ರೋಲ್, ಡಿಸೇಲ್ ಸೇರಿದಂತೆ ಅಡುಗೆ ಅನಿಲದ ದರ ಏರಿಕೆ ಮಾಡುವ ಮೂಲಕ ಇವರಿಗೆ ಕಪಾಳ ಮೋಕ್ಷ ಮಾಡಿದೆ. ತಾಕತ್ತಿದ್ದರೆ ಮೋದಿ ಪ್ರಶ್ನಿಸಲಿ ಎಂದು ವಾಗ್ದಾಳಿ ನಡೆಸಿದರು.
ನಾವು ಗ್ಯಾರಂಟಿ ನೀಡುವುದರ ಜೊತೆಗೆ ಅಭಿವೃದ್ದಿ ಮಾಡುತ್ತಿದ್ದೇವೆ. ಬಿಜೆಪಿಯವರ ರೀತಿ ಸುಳ್ಳು ಆಶ್ವಾಸನೆ ನೀಡಿಲ್ಲ. ಸಾರಿಗೆ ಸಿಬ್ಬಂದಿಗೆ ಬಿಜೆಪಿ ಹಣ ಇಟ್ಟಿರಲಿಲ್ಲ. ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಭರವಸೆ ಈಡೇರಿಸುವ ಜೊತೆಗೆ ಎಲ್ಲವನ್ನೂ ನಿರ್ವಹಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.



