ಬೆಂಗಳೂರು: ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ನಾವು ಉತ್ತರ ಕೊಡುತ್ತೇವೆ ಎಂದು ಹೇಳುವ ಮೂಲಕ ಗೃಹ ಸಚಿವ ಜಿ. ಪರಮೇಶ್ವರ್ ಅವರು ಕೆಂದ್ರ ಸಚಿವ ಹೆಚ್‌ಡಿಕೆ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ದೊಡ್ಡ ಖಾತೆಯ ಜವಬ್ದಾರಿ ನಿಭಾಯಿಸುತ್ತಿದ್ದಾರೆ. ಆ ಸ್ಥಾನದಲ್ಲಿ ಇದ್ದುಕೊಂಡು ರಾಜ್ಯ ಸರ್ಕಾರದ ನಾಯಕರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಅವರು ಏನು ಮಾಡುತ್ತಾರೋ ನೋಡೋಣ ಎಂದರು.
ಕೋವಿಡ್ ಹಗರಣದ ವಿಚಾರವಾಗಿ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ನಡೆದ ತನಿಖೆಯ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಈ ಹಿಂದೆ ನೀಡಿದ್ದ ವರದಿ ಆಧರಿಸಿ ಎಫ್‌ಐಆರ್ ದಾಖಲಾಗಿವೆ. ಕೆಲವು ದೂರುಗಳು ಇನ್ನು ಪರಿಶೀಲನೆಯಲ್ಲಿವೆ ಎಂದು ಹೇಳಿದರು.





