Mysore
27
haze

Social Media

ಗುರುವಾರ, 01 ಜನವರಿ 2026
Light
Dark

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ramalinga reddy

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ (ಎಫ್ ಸಿ) ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಖಾಸಗಿ ಬಸ್ ದುರಂತಕ್ಕೆ ಅವರು ತೀವ್ರ ವಿಷಾದ ವ್ಯಕ್ತಪಡಿಸಿದ್ದರು. ಬಸ್‌ನ ಡೀಸೆಲ್ ಟ್ಯಾಂಕಿಗೆ ಘರ್ಷಣೆಯಾಗಿರುವುದರಿಂದ ಬೆಂಕಿ ಹೊತ್ತಿಕೊಂಡಿದೆ. ಅಪಘಾತಕ್ಕೆ ಬಹುಶಃ ಅಜಾಗರೂಕತೆಯ ಚಾಲನೆ ಅಥವಾ ನಿದ್ದೆಯ ಮಂಪರು ಕಾರಣ ಇರಬಹುದು. ಸಾರಿಗೆ ಇಲಾಖೆಯ ಯೋಗೇಶ್ ಮತ್ತು ಹೆಚ್ಚುವರಿ ಆಯುಕ್ತ ಓಂಕಾರೇಶ್ವರ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ನಿಖರ ಕಾರಣವನ್ನು ಪತ್ತೆ ಹಚ್ಚಲಿದ್ದಾರೆ ಎಂದರು.

ಇದನ್ನು ಓದಿ: ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಆಂಧ್ರಪ್ರದೇಶದಲ್ಲಿ ಬಸ್ ದುರಂತ ಸಂಭವಿಸಿದ ಬಳಿಕ ಸಾರಿಗೆ ಬಸ್‌ಗಳಲ್ಲಿ ಯಾವುದೇ ರೀತಿಯ ಸ್ಛೋಟಕಗಳನ್ನು ಸಾಗಿಸಬಾರದು ಎಂದು ಕಟ್ಟಪ್ಪಣೆ ಮಾಡಿದ್ದೇವೆ. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯವಾದ ಲಗೇಜ್‌ಗಳನ್ನು ಸಾಗಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.

೨೦೧೩ರಲ್ಲಿ ತಾವು ಸಾರಿಗೆ ಇಲಾಖೆಯ ಸಚಿವರಾಗಿದ್ದಾಗ ಜಪಾನ್ ಟ್ರಾವೆಲ್ಸ್‌ನ ಬಸ್ಸೊಂದು ಹೈದರಾಬಾದ್‌ಗೆ ಹೋಗುವಾಗ ಬೆಂಕಿ ಹೊತ್ತಿಕೊಂಡು ನಾಲ್ಕೈದು ಮಂದಿ ಸಾವನ್ನಪ್ಪಿದ್ದರು. ಆಗ ತಾವು ಗಮನಿಸಿದಂತೆ ಆ ಬಸ್‌ನಲ್ಲಿ ತುರ್ತು ನಿರ್ಗಮನದ ಬಾಗಿಲು ಇರಲಿಲ್ಲ. ಅಪಘಾತದ ಸಂದರ್ಭದಲ್ಲಿ ಗ್ಲಾಸ್ ಒಡೆದು ಆಚೆ ಬರಬೇಕಿತ್ತು. ಐಶಾರಾಮಿ ಬಸ್‌ಗಳು ೮ರಿಂದ ೧೦ ಅಡಿ ಎತ್ತರ ಇರುತ್ತವೆ. ಮಕ್ಕಳು, ವಯಸ್ಸಾದವರು, ಹೆಣ್ಣು ಮಕ್ಕಳು ಅಷ್ಟು ಎತ್ತರದಿಂದ ಜಿಗಿಯಲು ಸಾಧ್ಯವಾಗುವುದಿಲ್ಲ. ಈ ಕಾರಣಕ್ಕೆ ಸಾರಿಗೆ ಇಲಾಖೆಯ ೨೫ ಸಾವಿರ ಬಸ್‌ಗಳಿಗೆ, ಎಲ್ಲಾ ಖಾಸಗಿ ವಾಹನಗಳಿಗೆ, ಓಮ್ನಿ ಬಸ್‌ಗಳಿಗೆ, ಶಾಲಾ ವಾಹನಗಳಿಗೆ ಕಡ್ಡಾಯವಾಗಿ ತುರ್ತು ನಿರ್ಗಮನದ ಬಾಗಿಲನ್ನು ಅಳವಡಿಸಲಾಗಿದೆ ಎಂದರು.

Tags:
error: Content is protected !!