ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ತಪ್ಪುವುದಿಲ್ಲ. ಅದೃಷ್ಟ ಇದ್ದರೆ ನಮ್ಮಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರೂ ಹೈಕಮಾಂಡ್ ಅಣತಿಯಂತೆಯೇ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ತರಲು ಹಗಲು ರಾತ್ರಿ ಕೆಲಸ ಮಾಡಿರುವುದೇ ಡಿಕೆಶಿ. ಜವಾಬ್ದಾರಿ ತೆಗೆದುಕೊಂಡು ಕಾರ್ಯಕರ್ತರಿಗೆ ಚೈತನ್ಯ ತುಂಬಿದ್ದಾರೆ. ಡಿಕೆಶಿ ಹುಮ್ಮಸ್ಸು ತುಂಬಿದ್ದಾರೆ. ಜನರಿಗೆ ಕೊಟ್ಟ ಮಾತಿನಂತೆ ಡಿ.ಕೆ.ಶಿವಕುಮಾರ್ ಆಡಳಿತ ಕೊಡುತ್ತಿದ್ದಾರೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪಕ್ಷ ಏನು ಹೇಳುತ್ತದೆಯೋ ಅದನ್ನು ಪಾಲಿಸಬೇಕು. ಸಿಎಂ, ಡಿಸಿಎಂ, ವರಿಷ್ಠರು ಕೂತು ಚರ್ಚೆ ಮಾಡುತ್ತಾರೆ. ಅವರವರ ಅಭಿಮಾನಿಗಳಿಗೆ ಆಸೆ ಇದ್ದೇ ಇರುತ್ತದೆ ಎಂದು ಹೇಳಿದರು.





