ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ ಗುಂಡಿಕ್ಕುತ್ತಿದ್ದೆವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.
ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ನಡೆದ ಜನಾಕ್ರೋಶ ಸಮಾವೇಶದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡಬೇಕಿದೆ ಎಂದರು.
ಬಜೆಟ್‌ನಲ್ಲಿ ಮುಸ್ಲಿಮರಿಗೆ ಮೀಸಲಾತಿ ಕೊಡುವ ಈ ರಾಜ್ಯದ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಮೇಲೆ ಐವತ್ತಕ್ಕೂ ಅಧಿಕ ವಸ್ತುಗಳ ಬೆಲೆ ಏರಿಕೆ ಅಗಿದೆ. ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಅಲ್ಲ, ಕಾಂಗ್ರೆಸ್ ನ ಮುಖ್ಯಮಂತ್ರಿ. ಇಂಥಹ ಹಿಂದೂ ವಿರೋಧಿ ಸರ್ಕಾರವನ್ನು ಬಿಜೆಪಿ ಕಾರ್ಯಕರ್ತರು ಖಂಡಿತಾ ಕಿತ್ತು ಹಾಕುತ್ತಾರೆ ಎಂದರು.
ಕರ್ನಾಟಕದಲ್ಲಿ ಜನವಿರೋಧಿ ಮತ್ತು ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರವಿದೆ.ರಾಜ್ಯದ ಮುಖ್ಯಮಂತ್ರಿಯಾದ ಮೇಲೆ ಎಷ್ಟು ಬಾರಿ ಮಂಗಳೂರಿಗೆ ಭೇಟಿ ಕೊಟ್ರು, ಎಷ್ಟು ಅನುದಾನ ಕೊಟ್ರು?. ಯಡಿಯೂರಪ್ಪ ಸಿಎಂ ಆಗಿದ್ದಾಗ ದ.ಕ ಜಿಲ್ಲೆಗೆ 19,500 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ದ.ಕ ಜಿಲ್ಲೆ ಕರ್ನಾಟಕ ರಾಜ್ಯದಲ್ಲಿ ಇಲ್ಲವೇ? ಹಾಗಾದರೆ. ಸ್ಪೀಕರ್ ಒಬ್ಬರು ಇದ್ದಾರೆ, ನಮ್ಮ ಶಾಸಕರು ಪ್ರತಿಭಟನೆ ಮಾಡಿದರೆ ಅಮಾನತು ಮಾಡ್ತಾರೆ. ಕಾನೂನು ಬಾಹಿರವಾಗಿ ನಮ್ಮನ್ನು ಹೊರಗಡೆ ಓಡಿಸಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿ ಜನಾಕ್ರೋಶ ಯಾತ್ರೆಯು ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್‌ವರೆಗೆ ಬೃಹತ್ ಪಾದಯಾತ್ರೆ ನಡೆಯಿತು. ಬಳಿಕ ಕ್ಲಾಕ್ ಟವರ್ ಮುಂಭಾಗ ನಡೆದ ಜನಾಕ್ರೋಶ ಸಮಾವೇಶ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಸದಾನಂದ ಗೌಡ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…
ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…