ಬೆಂಗಳೂರು : ಬಿಜೆಪಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ಮಾಡಬೇಕಾದಲ್ಲಿ ಮಾಡುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ನಾಳೆ ರಾಜ್ಯದ್ಯಂತ ರಸ್ತೆ ತಡೆ ನಡೆಸಲು ಮುಂದಾಗಿದ್ದಾರೆ. ಅದರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಪ್ರತಿಭಟನೆ ಅವರ ಹಕ್ಕು. ಆದರೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಏನಾದರೂ ಮಾಡಲಿ. ಅದನ್ನು ಬಿಟ್ಟು ರಸ್ತೆಗೆ ಇಳಿಯುತ್ತೇವೆ ಎಂದರೆ ಸರ್ಕಾರ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮಾಡುತ್ತೇವೆ ಎಂದರು.
ಒಂದು ವೇಳೆ ಲಾಠಿ ಚಾರ್ಜ್ ಮಾಡುವ ಸ್ಥಿತಿ ನಿರ್ಮಾಣವಾದರೆ ಅದನ್ನು ಮಾಡುತ್ತೇವೆ. ಅವರನ್ನು ತೆರವು ಮಾಡುವುದಕ್ಕೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕೋ ಎಲ್ಲವನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.





