ಬೆಂಗಳೂರು: ನಟಿ ರನ್ಯಾಗೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಚಿವರ ಸಹಕಾರವಿದೆ ಎಂಬ ಯತ್ನಾಳ್ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ.
ಇಂದು ಈ ಬಗ್ಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಹತ್ತಿರ ಸಚಿವರ ಕೈವಾಡದ ಬಗ್ಗೆ ಮಾಹಿತಿ ಇದ್ದರೆ ಬಹಿರಂಗಪಡಿಸಲಿ. ತನಿಖೆಗೂ ಅನುಕೂಲವಾಗುತ್ತದೆ ಎಂದರು.
ಈ ಪ್ರಕರಣದಲ್ಲಿ ಸಚಿವರ ಕೈವಾಡವಿದೆ ಎಂದರೆ, ಆ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಿ, ತನಿಗೆ ತುಂಬಾ ಉಪಯೋಗವಾಗುತ್ತದೆ ಎಂದು ಹೇಳಿದರು.