ಬಾಗಲಕೋಟೆ: ಸಂಸದರಾಗಿ ಪ್ರತಾಪ್ ಸಿಂಹ ಕೇಂದ್ರ ಸರ್ಕಾರದಿಂದ ಹಣ ತಂದು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹಣ ತಂದು ಅಭಿವೃದ್ಧಿ ಮಾಡಿದ್ದಾರೆ. ಇನ್ಯಾರಿಗೋ ಸಹಾಯ ಮಾಡುವ ದೃಷ್ಟಿಯಿಂದ ಇವರಿಗೆ ಟಿಕೆಟ್ ತಪ್ಪಿಸುವುದನ್ನ ಕರ್ನಾಟಕದ ಮತದಾರರು ಕ್ಷಮಿಸುವುದಿಲ್ಲ. ಟಿಕೆಟ್ ಕೈ ತಪ್ಪಿದರೇ ನಾವು ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು.
ಸಂಸದ ಪ್ರತಾಪ್ ಸಿಂಹ ಅವರಿಗೆ ಲೋಕಸಭಾ ಟಿಕೆಟ್ ಕೈ ತಪ್ಪುವ ಸಾಧ್ಯತೆ ವಿಚಾರವಾಗಿ ಮಾತನಾಡಿದ ಮುತಾಲಿಕ್, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಡೌಟ್ ಎನ್ನುವ ಬಗ್ಗೆ ಚರ್ಚೆ ಆಗುತ್ತಿದೆ. ಪ್ರತಾಪ್ ಸಿಂಹ ಅವರಿಗೆ ಎಂಪಿ ಟಿಕೆಟ್ ಡೌಟ್ ಅನ್ನುವಂತಹದ್ದು ಆಗಬಾರದು. ಇಡೀ ಕರ್ನಾಟಕದಲ್ಲಿ ಹಿಂದುತ್ವ ಹಾಗೂ ಅಭಿವೃದ್ಧಿಯನ್ನು ಸಮಾನಾಗಿ ಕೊಂಡ್ಯೊಯ್ದ ಏಕೈಕ ಸಂಸದರಾಗಿದ್ದಾರೆ. ಅಂತಹವರಿಗೆ ಡೌಟ್ ಅನ್ನುವ ಚರ್ಚೆಯೇ ಆಗಬಾರದು ಎಂದರು.
ಅಭಿವೃದ್ಧಿಯಲ್ಲಿ ಪ್ರತಾಪ್ ಸಿಂಹ ಅವರ ಕಾರ್ಯ ಶ್ಲಾಘನೀಯವಾಗಿದೆ ಆದರೆ, ಕೇಂದ್ರ ಸರ್ಕಾರ ಯಾಕೆ ಇವರ ಬಗ್ಗೆ ಚರ್ಚೆಗೆ ಅವಕಾಶ ಕೊಡುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೊಡದೇ ನೀಡದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ, ಕರ್ನಾಟಕದ ಚುನಾವಣೆ ಮೇಲೆ ಇದು ಪರಿಣಾಮ ಬೀರುತ್ತದೆ ಎಂದರು.
ಮೈಸೂರಿನಿಂದ ಕೈ ಅಭ್ಯರ್ಥಿಯಾಗಿ ಯತೀಂದ್ರ ಅವರನ್ನು ಕಣಕ್ಕಿಳಿಸಲು, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿಸಲು ಬಿಜೆಪಿ ಕಾಂಗ್ರೆಸ್ ರಾಜ್ಯ ನಾಯಕರ ಒಳ ಒಪ್ಪಂದವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುತಾಲಿಕ್, ಪ್ರತಾಪ್ ಸಿಂಹ ಟಿಕೆಟ್ ತಪ್ಪಿಸಲು ಒಳ ಒಪ್ಪಂದಗಳು ಏನೇನು ಆಟ ನಡೆಯತ್ತಿದೆ. ಅದು ನಾಳೆ ಬಿಜೆಪಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂದರು.
ಹಿಂದೂ ಕಾರ್ಯಕರ್ತ ರಾಜು ಹತ್ಯೆಯ ಸಮಯದಲ್ಲಿ ತಲ್ವಾರ್ ಹಿಡಕೊಂಡವರಿಗೆ ಎಚ್ಚರಿಕೆ ಕೊಟ್ಟಂತ ಏಕೈಕ ಸಂಸದ ಅವರು. ನೂರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ, ಯಶಸ್ವಿಯಾಗಿ ಹನುಮ ಜಯಂತಿಯನ್ನ ಮಾಡಿದ ಏಕೈಕ ಸಂಸದ ಅವರು. ಬೆಂಗಳೂರು- ಮೂಸೂರು ರಸ್ತೆ ಅಭಿವೃದ್ಧಿ ಮಾಡಿಸಿದ್ದು ಯಾರು? ಎಂದು ಪ್ರಶ್ನಿಸಿದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…