ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ.
ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ಸ್ವಯಂ ಚಾಲಿತವಾಗಿ ಕೇಂದ್ರ ಮತ್ತು ಸಂಬಂಧಿತ ವಲಯ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು ಎಂದು ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ.





