ಬೆಂಗಳೂರು: ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಡಿಸಿಎಂ ಡಿಕೆಶಿ ಅವರೇ ನಿಮ್ಮ ಪಕ್ಷದಲ್ಲಿ ನಿಮಗೆ ಎದುರಾಗಿರುವ ಕಂಟಕದಿಂದ ಪಾರಾಗಲು ಚಾಮುಂಡಿಬೆಟ್ಟ ಹಾಗೂ ಸಂಪ್ರದಾಯದ ದಸರಾವನ್ನು ಬಳಸಿಕೊಳ್ಳಬೇಡಿ. ಬಂಡೆಯೆಂದು ಬೀಗುತ್ತಿದ್ದ ನೀವು ಈಗಾಗಲೇ ಮುದ್ದೆಯಾಗಿ ಹೋಗಿದ್ದೀರಿ. ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ. ಹಿಂದೂ ಪರಂಪರೆಯ ವಿಜಯದಶಮಿ ಹಬ್ಬವನ್ನು ಮಲಿನ ಮಾಡಲು ಹೊರಟಿದ್ದೀರಿ. ಮಹಿಷಾಸುರ ಮರ್ದಿನಿ ನಿಮ್ಮನ್ನು ಮರ್ದನ ಮಾಡುವ ಕಾಲ ದೂರವಿಲ್ಲ. ಚಾಮುಂಡಿ ತಾಯಿ ಶ್ರದ್ಧೆಯ ಭಕ್ತರ ಸ್ವತ್ತು. ಅದನ್ನು ಮುಟ್ಟಲು ಹೋದರೆ ಕಾದಿದೆ ನಿಮಗೆ ಆಪತ್ತು ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.



