ರಾಜ್ಯ

ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗುತ್ತೀರಿ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಡಿಸಿಎಂ ಡಿಕೆಶಿ ಅವರೇ ನಿಮ್ಮ ಪಕ್ಷದಲ್ಲಿ ನಿಮಗೆ ಎದುರಾಗಿರುವ ಕಂಟಕದಿಂದ ಪಾರಾಗಲು ಚಾಮುಂಡಿಬೆಟ್ಟ ಹಾಗೂ ಸಂಪ್ರದಾಯದ ದಸರಾವನ್ನು ಬಳಸಿಕೊಳ್ಳಬೇಡಿ. ಬಂಡೆಯೆಂದು ಬೀಗುತ್ತಿದ್ದ ನೀವು ಈಗಾಗಲೇ ಮುದ್ದೆಯಾಗಿ ಹೋಗಿದ್ದೀರಿ. ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ. ಹಿಂದೂ ಪರಂಪರೆಯ ವಿಜಯದಶಮಿ ಹಬ್ಬವನ್ನು ಮಲಿನ ಮಾಡಲು ಹೊರಟಿದ್ದೀರಿ. ಮಹಿಷಾಸುರ ಮರ್ದಿನಿ ನಿಮ್ಮನ್ನು ಮರ್ದನ ಮಾಡುವ ಕಾಲ ದೂರವಿಲ್ಲ. ಚಾಮುಂಡಿ ತಾಯಿ ಶ್ರದ್ಧೆಯ ಭಕ್ತರ ಸ್ವತ್ತು. ಅದನ್ನು ಮುಟ್ಟಲು ಹೋದರೆ ಕಾದಿದೆ ನಿಮಗೆ ಆಪತ್ತು ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

9 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

12 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

13 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

13 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

19 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

19 hours ago