ರಾಜ್ಯ

ಬೆಂಗಳೂರಿನಲ್ಲಿ ಇನ್ನು ಮುಂದೆ ನೀರು ವ್ಯರ್ಥ ಮಾಡಿದ್ರೆ 5000 ದಂಡ

ಬೆಂಗಳೂರು: ನಗರದಲ್ಲಿ ನೀರು ವ್ಯರ್ಥ ಮಾಡಿದ್ರೆ ಜಲಮಂಡಳಿ 5000 ರೂ ದಂಡ ವಿಧಿಸಲಿದೆ. ಬೇಸಿಗೆಗೆ ಮುನ್ನವೇ ಜಲಮಂಡಳಿ ಎಚ್ಚೆತ್ತುಕೊಂಡಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ನೀರು ವ್ಯರ್ಥ ಮಾಡಿದ್ರೆ ದಂಡ ವಿಧಿಸಲು ಮುಂದಾಗಿದೆ. ಈ ಕುರಿತು ಜಲಮಂಡಳಿ ಆದೇಶ ಹೊರಡಿಸಿದೆ.

ಕಳೆದ ಬಾರಿ ಉಂಟಾದ ನೀರಿನ ಅಭಾವ, ಈ ಬಾರಿ ಆಗದಂತೆ ಜಲಮಂಡಳಿ ನೀರು, ಉಳಿತಾಯಕ್ಕೆ ಮುಂದಾಗಿದೆ. ಈ ಬಾರಿಯೂ ನೀರು ಪೋಲು ಮಾಡಿದ್ರೆ ದಂಡಾಸ್ತ್ರಕ್ಕೆ ಮುಂದಾಗಿದೆ. ಕಾರು, ಬೈಕ್‌, ಮನೆಯಂಗಳ ಇತರೆ ಕೆಲಸಗಳಿಗೆ ನೀರು ವ್ಯರ್ಥ ಮಾಡಿದ್ರೆ ಆಯಾ ವಲಯದ ಜಲಮಂಡಳಿ ಇಂಜಿನಿಯರ್ಸ್‌ 5 ಸಾವಿರ ರೂ ದಂಡ ವಿಧಿಸಲಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಸ್ವಚ್ಛತೆಗೆ, ಕೈತೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನರಂಜನೆಯ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ ಮಂದಿರ ಹಾಗೂ ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ ನಿಷೇಧಿಸಲಾಗಿದೆ. ಇದರ ಜೊತೆಗೆ ರಸ್ತೆ ನಿರ್ಮಾಣ ಹಾಗೂ ಸ್ವಚ್ಛತೆಗೆ ಕುಡಿಯುವ ನೀರನ್ನು ಬಳಕೆ ಮಾಡಿದ್ರೆ 5 ಸಾವಿರ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

13 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago