Mysore
16
clear sky

Social Media

ಶುಕ್ರವಾರ, 30 ಜನವರಿ 2026
Light
Dark

ವರಿಷ್ಠರು ಹೇಳಿದ ಕಡೆಯಲ್ಲಾ ಚುನಾವಣಾ ಪ್ರಚಾರ ಮಾಡುತ್ತೇನೆ: ಸುಮಲತಾ

ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು, ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಎಂದು ಮುಗುಳ್ನಕ್ಕರು.

ನಗರದಲ್ಲಿಂದು ಬಿಜೆಪಿಗೆ ಅಧಿಕೃತವಾಗಿ ಸೇರುವ ಮುನ್ನಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಕೇವಲ ಮಂಡ್ಯದಲ್ಲಿ ಮಾತ್ರ ನಡೆಯುತ್ತಿಲ್ಲ. ಪಕ್ಷದ ವರಿಷ್ಠರು ಯಾವ ಕ್ಷೇತ್ರದಲ್ಲಿ ಪ್ರಚಾರ ಮಾಡುವಂತೆ ಸೂಚಿಸುತ್ತಾರೋ ಅಲ್ಲಿ ಪ್ರಚಾರ ಮಾಡುತ್ತೇನೆ. ಕೇವಲ ಮಂಡ್ಯ ಮಾತ್ರ ಅಂತೇನಿಲ್ಲಾ ಎಂದರು.

ಮುಂದುವರಿದು ಬಿಜೆಪಿ ಸೇರ್ಪಡೆಗೊಂಡ ಬಳಿಕ ನಾನು ಪಕ್ಷದ ಚೌಕಟ್ಟಿನೊಳಗಡೆ ಕೆಲಸ ಮಾಡಬೇಕಾಗುತ್ತದೆ. ಅಲ್ಲಿ ಕಾರ್ಯಕರ್ತರು, ಹಿರಿಯ ಮುಖಂಡರಿರುತ್ತಾರೆ ಎಲ್ಲರೊಂದಿಗೆ ಜೊತೆಗೂಡಿ ಕೆಲಸ ಮಾಡುತ್ತೇನೆ ಎಂದು ಸುಮಲತಾ ಅಂಬರೀಶ್‌ ಹೇಳಿದರು.

Tags:
error: Content is protected !!