ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಎಂದು ಮುಗುಳ್ನಕ್ಕರು.
ನಗರದಲ್ಲಿಂದು ಬಿಜೆಪಿಗೆ ಅಧಿಕೃತವಾಗಿ ಸೇರುವ ಮುನ್ನಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಕೇವಲ ಮಂಡ್ಯದಲ್ಲಿ ಮಾತ್ರ ನಡೆಯುತ್ತಿಲ್ಲ. ಪಕ್ಷದ ವರಿಷ್ಠರು ಯಾವ ಕ್ಷೇತ್ರದಲ್ಲಿ ಪ್ರಚಾರ ಮಾಡುವಂತೆ ಸೂಚಿಸುತ್ತಾರೋ ಅಲ್ಲಿ ಪ್ರಚಾರ ಮಾಡುತ್ತೇನೆ. ಕೇವಲ ಮಂಡ್ಯ ಮಾತ್ರ ಅಂತೇನಿಲ್ಲಾ ಎಂದರು.
ಮುಂದುವರಿದು ಬಿಜೆಪಿ ಸೇರ್ಪಡೆಗೊಂಡ ಬಳಿಕ ನಾನು ಪಕ್ಷದ ಚೌಕಟ್ಟಿನೊಳಗಡೆ ಕೆಲಸ ಮಾಡಬೇಕಾಗುತ್ತದೆ. ಅಲ್ಲಿ ಕಾರ್ಯಕರ್ತರು, ಹಿರಿಯ ಮುಖಂಡರಿರುತ್ತಾರೆ ಎಲ್ಲರೊಂದಿಗೆ ಜೊತೆಗೂಡಿ ಕೆಲಸ ಮಾಡುತ್ತೇನೆ ಎಂದು ಸುಮಲತಾ ಅಂಬರೀಶ್ ಹೇಳಿದರು.
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…