Mysore
33
few clouds

Social Media

ಬುಧವಾರ, 11 ಮಾರ್ಚ್ 2026
Light
Dark

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

mahesh shetty timrodi

ಮಂಗಳೂರು: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್‌ ಕೋರ್ಟ್‌ಗೆ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್.‌30ಕ್ಕೆ ಮುಂದೂಡಿಕೆ ಮಾಡಿದೆ.

ಅಕ್ರಮವಾಗಿ ಎರಡು ತಲ್ವಾರ್‌ ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣಕ್ಕೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್‌ ಜಾರಿ ಮಾಡಿದ್ದಾರೆ.

ಎರಡು ನೋಟಿಸ್‌ ಜಾರಿ ಮಾಡಿದ್ದರೂ ಇದುವರೆಗೂ ಮಹೇಶ್‌ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸೆ.26ರಂದು ಅವರ ಮನೆಗೆ ತೆರಳಿದ ಬೆಳ್ತಂಗಡಿ ಠಾಣೆ ಪೊಲೀಸರು ಮೂರನೇ ನೋಟಿಸ್‌ ಅಂಟಿಸಿದ್ದಾರೆ. ಸೆಪ್ಟೆಂಬರ್.‌29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

10 ದಿನಗಳಿಂದ ಮಹೇಶ್‌ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿದ್ದಾರೆ. ಈ ನಡುವೆ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Tags:
error: Content is protected !!