mahesh shetty timrodi
ಮಂಗಳೂರು: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್‌ಗೆ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್.30ಕ್ಕೆ ಮುಂದೂಡಿಕೆ ಮಾಡಿದೆ.
ಅಕ್ರಮವಾಗಿ ಎರಡು ತಲ್ವಾರ್ ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದಾರೆ.
ಎರಡು ನೋಟಿಸ್ ಜಾರಿ ಮಾಡಿದ್ದರೂ ಇದುವರೆಗೂ ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸೆ.26ರಂದು ಅವರ ಮನೆಗೆ ತೆರಳಿದ ಬೆಳ್ತಂಗಡಿ ಠಾಣೆ ಪೊಲೀಸರು ಮೂರನೇ ನೋಟಿಸ್ ಅಂಟಿಸಿದ್ದಾರೆ. ಸೆಪ್ಟೆಂಬರ್.29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
10 ದಿನಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿದ್ದಾರೆ. ಈ ನಡುವೆ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…