ರಾಜ್ಯ

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ

ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ ಕೋಶದ ಎಇಇ ಅಜಯಸಿಂಗ್ ರಜಪೂತ್ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿಯ ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿವೆ. ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಈ ದಾಳಿಯಲ್ಲಿ ಸ್ವತಃ ಅಧಿಕಾರಿಗಳೇ ಅಕ್ರಮ ಆಸ್ತಿ ಕಂಡು ಬೆಚ್ಚಿಬಿದ್ದಿದ್ದಾರೆ. ಅಜಯಸಿಂಗ್‌ ಅವರಿಗೆ ಸೇರಿದ ಏಳು ಕಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಳಗಾವಿಯಲ್ಲಿ ಮೂರು ಮನೆ, ಕಚೇರಿ, ಬ್ಯಾಂಕ್‌ ಲಾಕರ್‌ ಪರಿಶೀಲನೆ, ಸವದತ್ತಿ, ಹುಕ್ಕರಿ, ಹುಬ್ಬಳ್ಳಿಯಲ್ಲಿ 18 ನಿವೇಶನ ಪತ್ತೆಯಾದರೆ, ಇತ್ತ ಮನೆಯಲ್ಲಿ 5.96 ಕೆಜಿ ಮೌಲ್ಯದ ಚಿನ್ನ, 5 ಕೆಜಿ ಬೆಳ್ಳಿ, 3.12 ಕೋಟಿ ಡೆಪಾಸಿಟ್‌, ಐಷಾರಾಮಿ ಕಾರು, ಬೈಕ್‌ಗಳು ಪತ್ತೆಯಾಗಿವೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಹಿನ್ನೆಲೆ ತನಿಖೆ ಮುಂದುವರಿದಿದ್ದು, ಬ್ಯಾಂಕ್ ಲಾಕರ್ ಪರಿಶೀಲನೆ ಬಾಕಿ ಇದೆ. ಲಾಕರ್ ಪರಿಶೀಲನೆ ವೇಳೆ ಮತ್ತಷ್ಟು ಅಕ್ರಮ ಆಸ್ತಿ ಪತ್ತೆ ಸಾಧ್ಯತೆ ಇದ್ದು, ಕಳೆದ ಬುಧವಾರ(ಏ.07) ಅಧಿಕಾರಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.

 

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

7 mins ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

19 mins ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

33 mins ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

34 mins ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

34 mins ago

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…

35 mins ago