– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ
ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ ಕೋಶದ ಎಇಇ ಅಜಯಸಿಂಗ್ ರಜಪೂತ್ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿಯ ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿವೆ. ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಈ ದಾಳಿಯಲ್ಲಿ ಸ್ವತಃ ಅಧಿಕಾರಿಗಳೇ ಅಕ್ರಮ ಆಸ್ತಿ ಕಂಡು ಬೆಚ್ಚಿಬಿದ್ದಿದ್ದಾರೆ. ಅಜಯಸಿಂಗ್ ಅವರಿಗೆ ಸೇರಿದ ಏಳು ಕಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಳಗಾವಿಯಲ್ಲಿ ಮೂರು ಮನೆ, ಕಚೇರಿ, ಬ್ಯಾಂಕ್ ಲಾಕರ್ ಪರಿಶೀಲನೆ, ಸವದತ್ತಿ, ಹುಕ್ಕರಿ, ಹುಬ್ಬಳ್ಳಿಯಲ್ಲಿ 18 ನಿವೇಶನ ಪತ್ತೆಯಾದರೆ, ಇತ್ತ ಮನೆಯಲ್ಲಿ 5.96 ಕೆಜಿ ಮೌಲ್ಯದ ಚಿನ್ನ, 5 ಕೆಜಿ ಬೆಳ್ಳಿ, 3.12 ಕೋಟಿ ಡೆಪಾಸಿಟ್, ಐಷಾರಾಮಿ ಕಾರು, ಬೈಕ್‌ಗಳು ಪತ್ತೆಯಾಗಿವೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಹಿನ್ನೆಲೆ ತನಿಖೆ ಮುಂದುವರಿದಿದ್ದು, ಬ್ಯಾಂಕ್ ಲಾಕರ್ ಪರಿಶೀಲನೆ ಬಾಕಿ ಇದೆ. ಲಾಕರ್ ಪರಿಶೀಲನೆ ವೇಳೆ ಮತ್ತಷ್ಟು ಅಕ್ರಮ ಆಸ್ತಿ ಪತ್ತೆ ಸಾಧ್ಯತೆ ಇದ್ದು, ಕಳೆದ ಬುಧವಾರ(ಏ.07) ಅಧಿಕಾರಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…