ಅಕ್ರಮ ಮರಳುಗಾರಿಕೆ ತಡೆಯಲು ಹೋದ ಸರ್ಕಾರಿ ಅಧಿಕಾರಿ ಮತ್ತು ಅವರ ಕುಟುಂಬದ ಮೇಲೆ ಹಲ್ಲೆ

ಬಳ್ಳಾರಿ: ಅಕ್ರಮ ಮರಳುಗಾರಿಕೆ ತಡೆಯಲು ಯತ್ನಿಸಿದ ಅಧಿಕಾರಿ ಮತ್ತು ಅವರ ಕುಟುಂಬದ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಪ್ರಭಾರಿ ಕಂದಾಯ ನಿರೀಕ್ಷಕ ವೆಂಕಟಸ್ವಾಮಿ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಬಳ್ಳಾರಿಯ ಮಿಲ್ಲರ್ ಪೇಟೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ವೆಂಕಟಸ್ವಾಮಿ ಅವರ ಪತ್ನಿ ಹಾಗೂ ಮಗನ ಮೇಲೂ ಹಲ್ಲೆಯತ್ನ ನಡೆದಿದೆ ಎನ್ನಲಾಗಿದೆ.

ಮಕ್ಬುಲ್, ಇಲಿಯಾಸ್,ತೌಸಿಫ್, ಸೆಯಾಸ್ ಸೇರಿ ಹಲವರು ಅಧಿಕಾರಿ ವೆಂಕಟಸ್ವಾಮಿ ಅವರ ಮನೆಗೆ ನುಗ್ಗಿ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಹಲ್ಲೆ ವೇಳೆ ವೆಂಕಟಸ್ವಾಮಿ ಹಾಗೂ ಪತ್ನಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

× Chat with us