Mysore
24
light rain

Social Media

ಬುಧವಾರ, 16 ಜುಲೈ 2025
Light
Dark

ಅಕ್ರಮ ಹಣ ವರ್ಗಾವಣೆ: ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜ.23ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಡೆಸುತ್ತಿರುವ ತನಿಖೆ ಪ್ರಶ್ನಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು 2025ರ ಜನವರಿ 23ಕ್ಕೆ ಸುಪ್ರೀಂಕೋರ್ಟ್‌ ಮುಂದೂಡಿದೆ ಎಂದು ಆದೇಶಿಸಿದೆ.

ಈ ಕುರಿತು ಇಂದು(ಡಿ.3) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಪ್ರತಿಭಾ ಎಂ.ಸಿಂಗ್‌ ಮತ್ತು ಅಮಿತ್‌ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವೂ ಈಗಾಗಲೇ ಪಟ್ಟಿ ಮಾಡಲಾದ ಪ್ರಕರಣಗಳು ಸಾಕಷ್ಟು ಇರುವ ಕಾರಣ ಈ ಪ್ರಕರಣದ ವಿಚಾರಣೆಯನ್ನು ಇಂದು ನಡೆಸಲು ಸಾಧ್ಯವಿಲ್ಲ. ಹೀಗಾಗಿ 2025ರ ಜನವರಿ 23 ರಂದು ವಿಚಾರಣೆಯನ್ನು ನಡೆಸಲಾಗುವುದು ಎಂದು ತೀರ್ಪು ಪ್ರಕಟಿಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು 2020ರಲ್ಲಿ ಇಡಿ ತನಿಖಾ ಸಂಸ್ಥೆ ಹೂಡಿರುವ ಪ್ರಕರಣಗಳನ್ನು ಹಾಗೂ ಸಮನ್ಸ್‌ಗಳನ್ನು ರದ್ದುಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅನ್ವಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಮುಂದಿನ ವರ್ಷ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಆದೇಶ ಹೊರಡಿಸಿದೆ.

Tags:
error: Content is protected !!