ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಡೆಸುತ್ತಿರುವ ತನಿಖೆ ಪ್ರಶ್ನಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು 2025ರ ಜನವರಿ 23ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ ಎಂದು ಆದೇಶಿಸಿದೆ.
ಈ ಕುರಿತು ಇಂದು(ಡಿ.3) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಪ್ರತಿಭಾ ಎಂ.ಸಿಂಗ್ ಮತ್ತು ಅಮಿತ್ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವೂ ಈಗಾಗಲೇ ಪಟ್ಟಿ ಮಾಡಲಾದ ಪ್ರಕರಣಗಳು ಸಾಕಷ್ಟು ಇರುವ ಕಾರಣ ಈ ಪ್ರಕರಣದ ವಿಚಾರಣೆಯನ್ನು ಇಂದು ನಡೆಸಲು ಸಾಧ್ಯವಿಲ್ಲ. ಹೀಗಾಗಿ 2025ರ ಜನವರಿ 23 ರಂದು ವಿಚಾರಣೆಯನ್ನು ನಡೆಸಲಾಗುವುದು ಎಂದು ತೀರ್ಪು ಪ್ರಕಟಿಸಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು 2020ರಲ್ಲಿ ಇಡಿ ತನಿಖಾ ಸಂಸ್ಥೆ ಹೂಡಿರುವ ಪ್ರಕರಣಗಳನ್ನು ಹಾಗೂ ಸಮನ್ಸ್‌ಗಳನ್ನು ರದ್ದುಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅನ್ವಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಂದಿನ ವರ್ಷ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಆದೇಶ ಹೊರಡಿಸಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…