ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದನ್ನು ಸರ್ಕಾರದ ನಿರ್ಧಾರದ ಬಗ್ಗೆ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತ್ತು.
ಡಿಕೆಶಿ ವಿರುದ್ಧ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇಂದು ಸಿಬಿಐ ತನಿಖೆ ಕುರಿತು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟ ಮಾಡಲಿದೆ.
ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೊಂಚ ಟೆನ್ಷನ್ ಶುರುವಾಗಿದ್ದು, ತೀರ್ಪು ಯಾರ ಪರ ಬರಲಿದೆ ಎಂಬುದನ್ನು ಕಾದುನೋಡಬೇಕಿದೆ.