Mysore
28
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

ಅಕ್ರಮ ವಾಸ: ಬೆಂಗಳೂರಲ್ಲಿ 25 ಬಾಂಗ್ಲಾ ಪ್ರಜೆಗಳು ಪತ್ತೆ

ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ ನಗರದಲ್ಲಿ ವಾಸ ಮಾಡುತಿದ್ದ ಬಾಂಗ್ಲಾದೇಶದ 25 ಪ್ರಜೆಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

ನಗರದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನುಸುಳಿ ವಾಸವಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಬಗ್ಗೆ ತನಿಖೆ ಆರಂಭಿಸಿ, ವಿಶೇಷ ಕಾರ್ಯಚರಣೆ ನಡೆಸಿ ಬಾಂಗ್ಲಾ ಪ್ರಜೆಗಳನ್ನ ಪತ್ತೆ ಹಚ್ಚಲಾಗಿದೆ ಎಂದು ಸಿಸಿಬಿ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ನಗರದ ವಿವಿಧೆಡೆ ತಾತ್ಕಾಲಿಕ್‌ ಶೆಡ್‌ಗಳಲ್ಲಿ ಉಳಿದುಕೊಂಡಿದ್ದ ಬಾಂಗ್ಲಾದೇಶದ ೨೫ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ತಂಡ ರಾಮಮೂರ್ತಿನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು ಹಾಗೂ ಹೆಬ್ಬಗೋಡಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿತ್ತು ಎಂದು ಹೇಳಿದರು.

ವಶಕ್ಕೆ ಪಡೆದವರಲ್ಲಿ ಇಬ್ಬರು ಅಪರಾಧ ಹಿನ್ನೆಲೆಯುಳ್ಳವರು. ಜೈಲಿಗೇ ಹೋಗಿ ಜಾಮೀನಿನ ಮೇಲೆ ಹೊರಗೆ ಇದ್ದರು. ಇದರಲ್ಲಿ ಐವರು ಪ್ರಜೆಗಳು ತಲೆಮರೆಸಿಕೊಂಡಿದ್ದಾರೆ ಎಂದರು.

ಮಾವನ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಲಾಗಿದೆ.  ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ನಗರಕ್ಕೆ ಕರೆಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ಕಡೆ ಪ್ರಜೆಗಳು ಕೆಲಸ ಮಾಡುತ್ತಿದ್ದರು. ಇನ್ನು ಹಲವರು ನಗರದಲ್ಲಿ ನೆಲೆಸಿರುವ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

Tags: