Criminal in handcuffs
ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ ನಗರದಲ್ಲಿ ವಾಸ ಮಾಡುತಿದ್ದ ಬಾಂಗ್ಲಾದೇಶದ 25 ಪ್ರಜೆಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ನಗರದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನುಸುಳಿ ವಾಸವಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಬಗ್ಗೆ ತನಿಖೆ ಆರಂಭಿಸಿ, ವಿಶೇಷ ಕಾರ್ಯಚರಣೆ ನಡೆಸಿ ಬಾಂಗ್ಲಾ ಪ್ರಜೆಗಳನ್ನ ಪತ್ತೆ ಹಚ್ಚಲಾಗಿದೆ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ನಗರದ ವಿವಿಧೆಡೆ ತಾತ್ಕಾಲಿಕ್ ಶೆಡ್‌ಗಳಲ್ಲಿ ಉಳಿದುಕೊಂಡಿದ್ದ ಬಾಂಗ್ಲಾದೇಶದ ೨೫ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ತಂಡ ರಾಮಮೂರ್ತಿನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು ಹಾಗೂ ಹೆಬ್ಬಗೋಡಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿತ್ತು ಎಂದು ಹೇಳಿದರು.
ವಶಕ್ಕೆ ಪಡೆದವರಲ್ಲಿ ಇಬ್ಬರು ಅಪರಾಧ ಹಿನ್ನೆಲೆಯುಳ್ಳವರು. ಜೈಲಿಗೇ ಹೋಗಿ ಜಾಮೀನಿನ ಮೇಲೆ ಹೊರಗೆ ಇದ್ದರು. ಇದರಲ್ಲಿ ಐವರು ಪ್ರಜೆಗಳು ತಲೆಮರೆಸಿಕೊಂಡಿದ್ದಾರೆ ಎಂದರು.
ಮಾವನ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಲಾಗಿದೆ. ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ನಗರಕ್ಕೆ ಕರೆಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ಕಡೆ ಪ್ರಜೆಗಳು ಕೆಲಸ ಮಾಡುತ್ತಿದ್ದರು. ಇನ್ನು ಹಲವರು ನಗರದಲ್ಲಿ ನೆಲೆಸಿರುವ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…