Mysore
17
clear sky

Social Media

ಗುರುವಾರ, 11 ಡಿಸೆಂಬರ್ 2025
Light
Dark

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಸಿದ್ದು ರಾಜೀನಾಮೆಗೆ ಆಗ್ರಹಿಸಿ ಸಿಎಂ ಮನೆಗೆ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜುಲೈ.3ರಂದು ಬೆಂಗಳೂರಿನಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಪಕ್ಷ ಬಿಜೆಪಿ ಜುಲೈ.3ರಂದು ಬೆಂಗಳೂರಿನಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ಬಿಜೆಪಿ ಶುಕ್ರವಾರ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು ಮತ್ತು ಸಿಎಂ ಸಿದ್ದು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿತು. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವರಾಗಿರುವ ಸಿಎಂ ಸಿದ್ದರಾಮಯ್ಯ ಅವರೇ ಜವಾಬ್ದಾರಿ ಹೊರಬೇಕು. ಅಲ್ಲದೇ ಈ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್‌ ಪಾಟೀಲ್‌, ನಿಗಮದ ಅಧ್ಯಕ್ಷ ಬಸವರಾಜ್‌ ದದ್ದಲ್‌ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.

ಇನ್ನೂ ಮೇ.26ರಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್‌ ಚಂದ್ರಶೇಖರ್‌ ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಮನೆಯಲ್ಲಿ ಡೆತ್‌ನೋಟ್‌ ಬರೆದಿಟ್ಟು ನೇಣಿಗೆ ಶರಣಾಗಿದ್ದರು. ನಂತರ ನಿಗಮದ ಅಕ್ರಮ ಹಣ ವರ್ಗಾವಣೆ ವಿಷಯ ಬೆಳಕಿಗೆ ಬಂದಿದ್ದು, ನಿಗಮಕ್ಕೆ ಸೇರಿದ 187 ಕೋಟಿ ರೂಪಾಯಿಯನ್ನು ಅನಧಿಕೃತವಾಗಿ ಹಲವು ಖಾತೆಗಳಿಗೆ ವರ್ಗಾಯಿಸಲಾಗಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ 193 ಬ್ಯಾಂಕ್‌ ಖಾತೆಗಳಿಂದ 10 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ.

 

Tags:
error: Content is protected !!