ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜುಲೈ.3ರಂದು ಬೆಂಗಳೂರಿನಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಪಕ್ಷ ಬಿಜೆಪಿ ಜುಲೈ.3ರಂದು ಬೆಂಗಳೂರಿನಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.
ಬಿಜೆಪಿ ಶುಕ್ರವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು ಮತ್ತು ಸಿಎಂ ಸಿದ್ದು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿತು. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವರಾಗಿರುವ ಸಿಎಂ ಸಿದ್ದರಾಮಯ್ಯ ಅವರೇ ಜವಾಬ್ದಾರಿ ಹೊರಬೇಕು. ಅಲ್ಲದೇ ಈ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.
ಇನ್ನೂ ಮೇ.26ರಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದರು. ನಂತರ ನಿಗಮದ ಅಕ್ರಮ ಹಣ ವರ್ಗಾವಣೆ ವಿಷಯ ಬೆಳಕಿಗೆ ಬಂದಿದ್ದು, ನಿಗಮಕ್ಕೆ ಸೇರಿದ 187 ಕೋಟಿ ರೂಪಾಯಿಯನ್ನು ಅನಧಿಕೃತವಾಗಿ ಹಲವು ಖಾತೆಗಳಿಗೆ ವರ್ಗಾಯಿಸಲಾಗಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ 193 ಬ್ಯಾಂಕ್ ಖಾತೆಗಳಿಂದ 10 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…