ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ೭ ಜಿಲ್ಲೆಯಲ್ಲಿ ಇಂದಿನಿಂದ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಕೂಡ ಸಾಕಷ್ಟು ಮಳೆಯಾಗುತ್ತಿದೆ. ಅಷ್ಟೇ ಅಲ್ಲದೆ ಮಲೆನಾಡಿನಲ್ಲಿಯೂ ಮಳೆ ಜೋರಾಗಿದೆ. ಉತ್ತರ ಕನ್ನಡ , ದಕ್ಷಿಣ ಕನ್ನಡ, ಉಡುಪಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಇನ್ನುಳಿದಂತೆ ಧಾರವಾಡ, ಹಾವೇರಿ, ಗದಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ. ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.