ರಾಜ್ಯ

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.

ಕರ್ನಾಟಕ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳ ಅಳವಡಿಕೆ ಕುರಿತು ಸ್ಪಷ್ಟನೆ ನೀಡಿದೆ. ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ 2019ರ ಏಪ್ರಿಲ್ 1ರ ಮುಂಚೆ ನೋಂದಾಯಿಸಲ್ಪಟ್ಟ ವಾಹನಗಳಿಗೆ HSRP ಕಡ್ಡಾಯವಲ್ಲ ಎಂಬ ಸುದ್ದಿ ಪ್ರಸಾರವಾಗಿದ್ದು, ಅದು ಸತ್ಯಕ್ಕೆ ದೂರವಾಗಿದೆ ಎಂದು ಇಲಾಖೆ ತಿಳಿಸಿದೆ.

ಸಾರಿಗೆ ಇಲಾಖೆಯ ಸ್ಪಷ್ಟೀಕರಣದಂತೆ, 2019ರ ಏಪ್ರಿಲ್ 1ರ ಮುಂಚೆ ನೋಂದಾಯಿಸಲ್ಪಟ್ಟ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯವಾಗಿದೆ. ಮಾಧ್ಯಮಗಳಲ್ಲಿ ಹರಿದಿರುವ “ಹಳೆಯ ವಾಹನಗಳಿಗೆ ಕಡ್ಡಾಯವಲ್ಲ” ಎಂಬ ಸುದ್ದಿ ತಪ್ಪಾಗಿದೆ. ಸಾರ್ವಜನಿಕರು ತಮ್ಮ ವಾಹನಗಳಿಗೆ ಶೀಘ್ರವಾಗಿ HSRP ಅಳವಡಿಸಿಕೊಳ್ಳಬೇಕಾಗಿದೆ ಎಂದು ಇಲಾಖೆ ತಿಳಿಸಿದೆ.

ಅತಿ ಸುರಕ್ಷಿತ ನೋಂದಣಿ ಫಲಕಗಳು ಎಂಬುದು ವಾಹನಗಳಿಗೆ ಅಳವಡಿಸುವ ವಿಶೇಷ ರೀತಿಯ ನಂಬರ್ ಪ್ಲೇಟ್. ಇವು ಸಾಮಾನ್ಯ ಫಲಕಗಳಿಗಿಂತ ಹೆಚ್ಚು ಸುರಕ್ಷಿತವಾಗಿದ್ದು, ನಕಲಿ ಫಲಕಗಳನ್ನು ತಡೆಯಲು ಹಾಗೂ ವಾಹನಗಳ ಗುರುತಿನ ಖಚಿತತೆ ಹೆಚ್ಚಿಸಲು ವಿನ್ಯಾಸಗೊಳಿಸಲಾಗಿದೆ.

HSRP ಫಲಕಗಳಲ್ಲಿ ಲೇಸರ್ ಕೋಡ್, ಕ್ರೋಮ್-ಬೇಸ್ ಹೋಲೋಗ್ರಾಮ್, ಶಾಶ್ವತ ಅಳವಡಿಕೆ ವ್ಯವಸ್ಥೆ ಇರುತ್ತದೆ. ಇದರಿಂದ ಫಲಕವನ್ನು ಸುಲಭವಾಗಿ ತೆಗೆದು ಹಾಕಲು ಸಾಧ್ಯವಿಲ್ಲ. ಪ್ರತಿಯೊಂದು ಫಲಕಕ್ಕೂ ವಿಶಿಷ್ಟ ಗುರುತು ಸಂಖ್ಯೆ ಇರುತ್ತದೆ.

HSRP ಅಳವಡಿಕೆ ಮೂಲಕ ರಸ್ತೆ ಸುರಕ್ಷತೆ ಹೆಚ್ಚುವುದು, ವಾಹನ ಕಳ್ಳತನ ತಡೆಯುವುದು, ಹಾಗೂ ಟ್ರಾಫಿಕ್ ನಿಯಂತ್ರಣ ವ್ಯವಸ್ಥೆ ಸುಧಾರಿಸುವುದು ಸರ್ಕಾರದ ಉದ್ದೇಶವಾಗಿದೆ. ಆದ್ದರಿಂದ, ಹೊಸದಾಗಲಿ ಹಳೆಯದಾಗಲಿ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯವಾಗಿದೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

14 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

16 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

16 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

17 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

20 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

21 hours ago