ಬೆಂಗಳೂರು : ʼʼಸುಳ್ಳು ಮತ್ತು ದ್ವೇಷದ ಸುದ್ದಿಗಳು ಜಿಡಿಪಿ ಗೆ ಮಾರಕʼʼಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು.
ʼತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕುʼ ಎಂದು ಸೂಚನೆ ನೀಡಿದರು.
ʼಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆʼ ಎಂದರು.
ʼಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ ಜಿಡಿಪಿ ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.
ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲಾ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು.
ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…
ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ ಬೆಂಗಳೂರು: ರಾಷ್ಟ್ರೀಯ ಜನಗಣತಿ…
ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…