ರಾಜ್ಯ

ಕೃಷಿ ಇಲಾಖೆಯ ಸಾವಿರ ಹುದ್ದೆ ಭರ್ತಿಗೆ ಶೀಘ್ರ ಕ್ರಮ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಇಲಾಖೆಯಲ್ಲಿ 1 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಿ 2-3 ತಿಂಗಳ ಒಳಗಾಗಿ ನೇಮಕಾತಿ ಆದೇಶ ನೀಡುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶೇ.70 ರಷ್ಟು ಜನ ಕೃಷಿ ಅವಲಂಬಿತರಾಗಿದ್ದಾರೆ. ಬೇಸಾಯವನ್ನು ಲಾಭದಾಯಕವಾಗಿಸಿದರೆ ಅಷ್ಟು ಜನರ ಬದುಕು ಸುಧಾರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದರು.

ಇಲಾಖೆಯಲ್ಲಿ ಶೇ.57ರಷ್ಟು ಸಿಬ್ಬಂದಿಗಳ ಕೊರತೆ ಇದೆ. ಅಂದ ಮಾತ್ರಕ್ಕೆ ಯಾವುದೇ ಯೋಜನೆಗಳನ್ನು ನಿಲ್ಲಿಸಿಲ್ಲ. ಜಲಾನಯನ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ ಮಾಡಿ ಕೇಂದ್ರ ಸರಕಾರದಿಂದ 300 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳಲಾಗಿದೆ. ಕೃಷಿ ಹೊಂಡ ನಿರ್ಮಾಣ ಯೋಜನೆಯನ್ನು 224 ಕ್ಷೇತ್ರಗಳಿಗೂ ವಿಸ್ತರಣೆ ಮಾಡಲಾಗಿದೆ ಎಂದರು.

ಒಂದು ಸಾವಿರ ಹುದ್ದೆಗಳ ನೇಮಕಾತಿಯಾದ ಬಳಿಕ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಣೆಯಾಗಲಿದೆ. ಆವರೆಗೂ ಪ್ರಭಾರ ಜವಾಬ್ದಾರಿಗಳಲ್ಲೇ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದಾರೆ ಎಂದರು.

ಕೃಷಿಯಲ್ಲಿ ಕಡಿಮೆ ನೀರಿನ ಬಳಕೆ, ತಂತ್ರಜ್ಞಾನ, ಹೆಚ್ಚಿನ ಇಳುವರಿ- ರೋಗನಿರೋಧಕ ತಳಿ ಸೇರಿದಂತೆ ಹಲವು ಸುಧಾರಣೆ ಕ್ರಮಗಳು ನಿರಂತರವಾಗಿ ನಡೆಯುತ್ತಿದೆ. ಕೃಷಿ ವಿಮಾ ಯೋಜನೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

1 hour ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

1 hour ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

1 hour ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

2 hours ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

2 hours ago