Categories: ರಾಜ್ಯ

ಬಾಲಕಿಯ ಸಂಕಷ್ಟಕ್ಕೆ ತಕ್ಷಣ ಸ್ಪಂದನೆ: ಮಾನವೀಯತೆ ಮೆರೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ತನ್ನ ಓದುವ ಹುಮ್ಮಸ್ಸಿಗೆ ಅಡ್ಡಿಯಾಗಿರುವ ಸ್ವಂತ ತಂದೆಯ ಕಿರುಕುಳ ತಾಳಲಾರದೆ ತಮ್ಮ ಬಳಿಗೆ ಬಂದ 12 ವರ್ಷದ ಬಾಲಕಿಯ ಕಷ್ಟಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾನವೀಯತೆ ತೋರಿದ್ದಾರೆ.

ಶುಕ್ರವಾರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕ್ಷೇತ್ರದ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಮನೆಗೆ ಆಗಮಿಸಿದಾಗ ಬಾಲಕಿಯೊಬ್ಬಳು ತನ್ನ ಅಜ್ಜಿಯ ಜೊತೆಗೆ ನಿಂತಿದ್ದಳು. ಹಿರೇಬಾಗೇವಾಡಿಯವಳಾದ ಬಾಲಕಿಯ ತಂದೆ ನಿತ್ಯ ಕುಡಿದು ಬಂದು ಬಾಲಕಿಗೆ ಮತ್ತು ಆಕೆಯ ತಾಯಿಗೆ ಹಿಂಸೆ ನೀಡುತ್ತಿದ್ದ. ಇದರಿಂದ ಬೇಸತ್ತ ತಾಯಿ ತವರು ಮನೆ ಸೇರಿದಳು. ಆದರೆ, ಹಿರೇಬಾಗೇವಾಡಿಯ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಬಾಲಕಿ ಓದು ಬಿಟ್ಟು ಹೋಗಲು ಒಪ್ಪಲಿಲ್ಲ. ಆದರೆ ತಂದೆಯ ಹಿಂಸೆಯನ್ನು ಸಹಿಸುವುದೂ ಸಾಧ್ಯವಿರಲಿಲ್ಲ.

ಹಾಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬಳಿ ಹೋದರೆ ಏನಾದರೂ ಪರಿಹಾರ ಸಿಗಬಹುದು ಎಂದು ಅಜ್ಜಿಯನ್ನು ಕರೆದುಕೊಂಡು ಬಂದಿದ್ದಳು. ಅದಾಗಲೇ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಬಾಲಕಿಯ ಕಷ್ಟ ಆಲಿಸುತ್ತಿದ್ದರು. ಎಲ್ಲೇ ಆದರೂ ಹಾಸ್ಟೆಲ್ ನಲ್ಲಿ ಇದ್ದು ಓದುತ್ತೇನೆ. ಆದರೆ ಮನೆಯಲ್ಲಿ ಇರಲು ಸಾಧ್ಯವಿಲ್ಲ, ಓದನ್ನು ನಿಲ್ಲಿಸುವುದಿಲ್ಲ ಎಂದು ಬಾಲಕಿ ಸಚಿವರ ಬಳಿ ಅಳಲು ತೋಡಿಕೊಂಡಳು.

ಈಕೆ ನನ್ನ ಮಗಳು; ತೊಂದರೆಯಾಗದಂತೆ ನೋಡಿಕೊಳ್ಳಿ
ತಕ್ಷಣ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ನಾಗರಾಜ ಅವರಿಗೆ ಕರೆ ಮಾಡಿದ ಲಕ್ಷ್ಮೀ ಹೆಬ್ಬಾಳಕರ್, ತಮ್ಮ ಇಲಾಖೆಯ ಸವದತ್ತಿ ಬಾಲಕಿಯರ ವಸತಿ ನಿಲಯದಲ್ಲಿ ಬಾಲಕಿ ಉಳಿದುಕೊಳ್ಳಲು ಮತ್ತು ವಿದ್ಯಾಭ್ಯಾಸ ಮುಂದುವರಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಬಾಲಕಿಗೆ ಅಗತ್ಯವಾದ ಬಟ್ಟೆ ಮತ್ತಿತರ ವಸ್ತುಗಳನ್ನು ಖರೀದಿಸಲು ಆರ್ಥಿಕ ನೆರವನ್ನೂ ಸಚಿವರು ಒದಗಿಸಿದರು. ಈ ಬಾಲಕಿ ನನ್ನ ಮಗಳಿದ್ದಂತೆ, ಅವಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಉತ್ತಮ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕೆ ವ್ಯವಸ್ಥೆ ಮಾಡಬೇಕು ಎಂದು ಸಚಿವರು ಸೂಚಿಸಿದರು.

ಬಾಲಕಿಯನ್ನು ಸಂತೈಸಿದ ಲಕ್ಷ್ಮೀ ಹೆಬ್ಬಾಳಕರ್, ನಿನ್ನ ವಿದ್ಯಾಭ್ಯಾಸಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುವುದು. ಉತ್ತಮವಾಗಿ ಓದಿ ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಹಾರೈಸಿದರು.

ಕೆಲವೇ ಹೊತ್ತಿನಲ್ಲಿ ಮಕ್ಕಳ ರಕ್ಷಣಾಲಯದ ಸಿಬ್ಬಂದಿ ಜೊತೆಗೆ ಆಗಮಿಸಿದ ನಾಗರಾಜ ಅವರು, ಬಾಲಕಿಯನ್ನು ಸವದತ್ತಿ ವಸತಿ ನಿಲಯಕ್ಕೆ ಸೇರಿಸಲು ಕ್ರಮ ತೆಗೆದುಕೊಂಡರು. ಬಾಲಕಿಯನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಲಾಗುವುದು. ವರ್ಷದ 365 ದಿನವೂ ಆಕೆಗೆ ಊಟ, ವಸತಿ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

5 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

5 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

5 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

5 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

5 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

6 hours ago