ಬೆಂಗಳೂರು: ಸಚಿವ ಭೈರತಿ ಸುರೇಶ್ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಭೈರತಿ ಸುರೇಶ್ ಅವರು ಮುಡಾದಿಂದ ಫೈಲ್‌ಗಳನ್ನು ಸುಟ್ಟು ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಭೈರತಿ ಸುರೇಶ್ ಅವರು ಫೈಲ್‌ಗಳನ್ನು ಮುಡಾ ಕಚೇರಿಯಿಂದ ತಂದಿರುವುದು ಸತ್ಯ. ಫೈಲ್‌ಗಳನ್ನು ಸುಟ್ಟಿರುವುದು ಸತ್ಯ. ಈ ವಿಚಾರದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಸಚಿವ ಭೈರತಿ ಸುರೇಶ್‌ರನ್ನು ತಕ್ಷಣವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.