ರಾಜ್ಯ

ಎಫ್.ಆರ್.ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಸೋಮವಾರದಿಂದ ಆರಂಭಗೊಂಡ ಮಳೆಗಾಲದ ಅಧಿವೇಶನದ ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯರಾದ ಗೋವಿಂದರಾಜು ಕೇಳಿದ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಗರ್ಭಿಣಿ, ಬಾಣಂತಿಯರು, ಕಿಶೋರಿಯರು ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆ ಸೇರಿದಂತೆ ಆರೋಗ್ಯದ ಮೇಲೆ ನಿಗಾ ವಹಿಸಲು ಫಲಾನುಭವಿಗಳಿಗೆ ಫೇಸ್ ಕ್ಯಾಪ್ಚರ್ ಮೂಲಕ ಸರಬರಾಜು ಮಾಡುವಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಕರ್ನಾಟಕದಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಪಾರದರ್ಶಕತೆ ತರಲು ಇದು ಸಹಕಾರಿಯಾಗಲಿದೆ ಎಂದರು.

ಈ ತಂತ್ರಾಂಶ ಜಾರಿಗೊಳಿಸಿದ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ, ಪ್ರಸ್ತುತ ಶೇಕಡ 94.2 ರಷ್ಟು ಫಲಾನುಭವಿಗಳನ್ನು ಎಫ್‌ ಆರ್‌ಎಸ್‌ ಮೂಲಕ ನೋಂದಣಿ ಮಾಡುವ ಮೂಲಕ ಇಡೀ ದೇಶಕ್ಕೆ 2ನೇ ಸ್ಥಾನದಲ್ಲಿದೆ ಎಂದು ಸಚಿವರು ಉತ್ತರಿಸಿದರು.

ರಾಜ್ಯದ ಅಂಗನವಾಡಿ ಕೇಂದ್ರಗಳಿಂದ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಕೆಯಾಗುತ್ತಿರುವ ಆಹಾರ ವ್ಯವಸ್ಥೆಗೆ ಮತ್ತಷ್ಟು ಪಾರದರ್ಶಕತೆ ತರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಎಫ್‌ಆರ್‌ಎಸ್‌ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

ಎಫ್‌ಆರ್‌ಎಸ್‌ ಜಾರಿಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಕೆಲಸದ ಒತ್ತಡ ಜಾಸ್ತಿಯಾಗುತ್ತಿದೆ. ಹೀಗಾಗಿ ಅವರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಉತ್ತರಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ವರ್ಷ ಹೊಸ ಮೊಬೈಲ್‌ ಕೊಡಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ನಿರ್ದೇಶನದ ಮೇಲೆ ಎಫ್‌ಆರ್‌ಎಸ್‌ ಮೂಲಕ ಫಲಾನುಭವಿಗಳನ್ನು ಗುರುತಿಸಬೇಕು. ಎಫ್‌ಆರ್‌ಎಸ್‌ ಮೂಲಕ ಮೊಬೈಲ್‌ ಸಂಖ್ಯೆಯನ್ನು ಆಧಾರ್‌ ಸಂಖ್ಯೆಗೆ ಜೋಡಣೆ ಮಾಡದಿದ್ದರೆ, ಕೇಂದ್ರ ಸರ್ಕಾರದಿಂದ ಐಸಿಡಿಎಸ್ ಕಾರ್ಯಕ್ರಮಗಳಿಗೆ ಆಹಾರ ಪದಾರ್ಥಗಳು ಬರುವುದು ನಿಲ್ಲುತ್ತದೆ. ಹೀಗಾಗಿ ಫಲಾನುಭವಿಗಳಿಗೆ ಪಾರದರ್ಶಕವಾಗಿ ಆಹಾರ ತಲುಪಿಸುವ ಸಲುವಾಗಿ ಎಫ್‌ಆರ್‌ಎಸ್‌ ಜಾರಿ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಫ್‌ಆರ್‌ಎಸ್‌ ತಂತ್ರಜ್ಞಾನವನ್ನು ಮತ್ತಷ್ಟು ಸರಳಿಕರಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago