DK Shivakumar
ಬೆಂಗಳೂರು : ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಅಣೆಕಟ್ಟು ನಿರ್ಮಾಣ ಕಾಮಗಾರಿಯನ್ನು ಕರ್ನಾಟಕ ಸರ್ಕಾರ ಕೈಗೆತ್ತಿಕೊಳುವುದು ಖಚಿತ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 28 ಮಂದಿ ಲೋಕಸಭಾ ಸದಸ್ಯರು, 12 ಮಂದಿ ರಾಜ್ಯಸಭಾ ಸದಸ್ಯರು ಬಾಯಿ ಮುಚ್ಚಿ ಕುಳಿತುಕೊಂಡಿರುವುದು ತಪ್ಪು, ಮಹದಾಯಿ ವಿಚಾರದಲ್ಲಿ ಸಂಸತ್‌ನಲ್ಲಿ ದನಿ ಎತ್ತಬೇಕು ಎಂದು ಆಗ್ರಹಿಸಿದರು.
ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಲ್ಲಿನ ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆ ಖಂಡನೀಯ. ಅವರಿಗೆ ಮಾನಸಿಕ ಸ್ಥಿಮಿತ ಇಲ್ಲವಾಗಿದೆ. ಒಕ್ಕೂಟ ವ್ಯವಸ್ಥೆಯ ಬಗ್ಗೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ನ್ಯಾಯಾಧೀಕರಣದಲ್ಲಿ ಮಹದಾಯಿ ನದಿ ನೀರಿನ ಹಂಚಿಕೆ ಮಾಡಿ ತೀರ್ಪು ನೀಡಿ ಆಗಿದೆ. ಅದರಂತೆ ಕಳಸಾ ಬಂಡೂರಿ ನಾಲಾ ಅಣೆಕಟ್ಟು ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು. ಅರಣ್ಯ ಇಲಾಖೆಯ ಅನುಮತಿ ಮಾತ್ರ ಬಾಕಿ ಇತ್ತು. ಎಲ್ಲಿಯೂ ಕೆಲಸ ಮಾಡಬೇಡಿ ಎಂದು ಹೇಳಿಲ್ಲ ಎಂದರು.
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…
ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…