ರಾಜ್ಯ

ಮಹದಾಯಿ ಯೋಜನೆ ಜಾರಿ ಖಚಿತ : ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು : ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಅಣೆಕಟ್ಟು ನಿರ್ಮಾಣ ಕಾಮಗಾರಿಯನ್ನು ಕರ್ನಾಟಕ ಸರ್ಕಾರ ಕೈಗೆತ್ತಿಕೊಳುವುದು ಖಚಿತ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 28 ಮಂದಿ ಲೋಕಸಭಾ ಸದಸ್ಯರು, 12 ಮಂದಿ ರಾಜ್ಯಸಭಾ ಸದಸ್ಯರು ಬಾಯಿ ಮುಚ್ಚಿ ಕುಳಿತುಕೊಂಡಿರುವುದು ತಪ್ಪು, ಮಹದಾಯಿ ವಿಚಾರದಲ್ಲಿ ಸಂಸತ್‌ನಲ್ಲಿ ದನಿ ಎತ್ತಬೇಕು ಎಂದು ಆಗ್ರಹಿಸಿದರು.

ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಲ್ಲಿನ ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆ ಖಂಡನೀಯ. ಅವರಿಗೆ ಮಾನಸಿಕ ಸ್ಥಿಮಿತ ಇಲ್ಲವಾಗಿದೆ. ಒಕ್ಕೂಟ ವ್ಯವಸ್ಥೆಯ ಬಗ್ಗೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ನ್ಯಾಯಾಧೀಕರಣದಲ್ಲಿ ಮಹದಾಯಿ ನದಿ ನೀರಿನ ಹಂಚಿಕೆ ಮಾಡಿ ತೀರ್ಪು ನೀಡಿ ಆಗಿದೆ. ಅದರಂತೆ ಕಳಸಾ ಬಂಡೂರಿ ನಾಲಾ ಅಣೆಕಟ್ಟು ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು. ಅರಣ್ಯ ಇಲಾಖೆಯ ಅನುಮತಿ ಮಾತ್ರ ಬಾಕಿ ಇತ್ತು. ಎಲ್ಲಿಯೂ ಕೆಲಸ ಮಾಡಬೇಡಿ ಎಂದು ಹೇಳಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

14 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

21 hours ago