ರಾಜ್ಯ

ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಕೆ : ಫೆ.28 ಗಡುವು

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಬಸ್ ಮಾಲೀಕರಿಗೆ ಸಾರಿಗೆ ಇಲಾಖೆಯು ಫೆ.28ರವರೆಗೆ ಗಡುವು ನೀಡಿದೆ.

ಅಗ್ನಿ ದುರಂತಗಳನ್ನು ತಡೆಗಟ್ಟಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಸಂಸ್ಥೆಗಳ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಖಾಸಗಿ ಬಸ್ ಮಾಲೀಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಚಿತ್ರದುರ್ಗ ಖಾಸಗಿ ಬಸ್ ಅಗ್ನಿ ದುರಂತದ ನಂತರ ಸುರಕ್ಷತಾ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಕಳೆದ ತಿಂಗಳ 21 ರಂದು ಖಾಸಗಿ ಬಸ್ ಮಾಲೀಕರು, ಕೋಚ್ ನಿರ್ಮಾಣ ಕಂಪೆನಿಗಳ ಪ್ರತಿನಿಧಿಗಳು ಹಾಗೂ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಬಸ್ ಬಾಡಿ ನಿರ್ಮಾಣ ವಿಧಾನ, ತುರ್ತು ನಿರ್ಗಮನ ದ್ವಾರಗಳ ಸಂಖ್ಯೆ, ಅಗ್ನಿಶಾಮಕ ಸಾಧನಗಳ ಅಳವಡಿಕೆ, ಎಮರ್ಜೆನ್ಸಿ ಎಕ್ಸಿಟ್ ಬಳಿ ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ 11 ನಿಯಮಗಳನ್ನು ಕಡ್ಡಾಯಗೊಳಿಸಲಾಗಿತ್ತು.

ಇನ್ನು ಎಸಿ ಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಲ್ಲಿ ನಂದಿಸುವ ವಿಧಾನಗಳ ಬಗ್ಗೆ ಸೂಚನೆ ನೀಡಬೇಕು, ಗ್ಲಾಸ್ ಒಡೆದು ಹೊರಬರಲು ಹ್ಯಾಮರ‍್ಗಳನ್ನು ಇರಿಸಬೇಕು, ಪ್ರಯಾಣಿಕರಿಗೆ ಎಚ್ಚರಿಕೆ ಅಲಾರಂ ವ್ಯವಸ್ಥೆ ಮಾಡಬೇಕು ಹಾಗೂ ಡೋರ್ ಜಂಪ್ ಮಾಡಲು ಮೆಟ್ಟಿಲುಗಳ ಸೌಲಭ್ಯ ಒದಗಿಸಬೇಕು ಎಂದು ಸಚಿವರು ಖಾಸಗಿ ಬಸ್ ಮಾಲೀಕರಿಗೆ ಮತ್ತು ಬಸ್ ಬಾಡಿ ಬಿಲ್ಡಿಂಗ್ ಮಾಡುವ ಕಂಪೆನಿಗಳಿಗೆ ಎಚ್ಚರಿಕೆ ನೀಡಿದ್ದರು.

ಈ ನಿಯಮಗಳನ್ನು ಪಾಲಿಸದ ಬಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದ್ದು, ಫಿಟ್‌ನೆಸ್ ರದ್ದುಪಡಿಸುವುದು, ಬಸ್ ಸಂಚಾರಕ್ಕೆ ನಿರ್ಬಂಧ ಹಾಗೂ ದಂಡ ವಿಧಿಸುವ ಕ್ರಮಗಳೂ ಜಾರಿಯಾಗುವ ಸಾಧ್ಯತೆ ಇದೆ. ಕೆಲ ದಿನಗಳ ಹಿಂದೆ ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಟಿದ್ದ ಕೆಎ 01-ಎಇ 5217 ನಂಬರಿನ ಸೀ ಬರ್ಡ್ ಬಸ್, ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ವೇಗವಾಗಿ ಬಂದು ಬಸ್‌ನ ಡೀಸೆಲ್ ಟ್ಯಾಂಕ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಮೊದಲು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್‌ಗೂ ಆವರಿಸಿತ್ತು. ಚಿತ್ರದುರ್ಗದ ಅಗ್ನಿ ದುರಂತದ ಬಳಿಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ಖಾಸಗಿ ಬಸ್‌ಗಳ ಸುರಕ್ಷತಾ ಮಾನದಂಡಗಳನ್ನು ಮರುಪರಿಶೀಲಿಸುವಂತೆ ಸೂಚಿಸಿತ್ತು.

ಅನುಸರಿಸಬೇಕಾದ ಕಡ್ಡಾಯ ನಿಯಮಗಳು

  • ಸ್ಲೀಪರ್ ಬಸ್‌ಗಳಲ್ಲಿ ಚಾಲಕರ ಹಿಂಬದಿ ಡೋರ್ ತೆಗೆಯಬೇಕು
  • ಸ್ಲೀಪರ್ ಬರ್ತ್‌ಗಳಲ್ಲಿ ಸ್ಲೈಡರ್ ತೆಗೆಯಬೇಕು
  • ಫೈರ್ ಡಿಟೆಕ್ಷನ್ ಅನ್ನು ತಿಂಗಳೊಳಗೆ ಅಳವಡಿಸಬೇಕು
  • 10 ಕೆಜಿ ತೂಕದ ಅಗ್ನಿ ಶಾಮಕ ಸಾಧನ ಅಳವಡಿಕೆ ಕಡ್ಡಾಯ
  • ಚಾಸಿಸ್ ಅನಧಿಕೃತ ವಿಸ್ತರಣೆಗೆ ಬ್ರೇಕ್
  • ಅನುಮೋದಿತ ಟೆಸ್ಟಿಂಗ್ ಏಜೆನ್ಸಿಯಿಂದ ಪ್ರಮಾಣ ಪತ್ರ ಕಡ್ಡಾಯ
  • ಪ್ರಯಾಣಿಕರ ಸೇಫ್ಟಿ ಮಾನದಂಡ ಇದ್ದರೆ ಮಾತ್ರ ಎಫ್‌ಸಿ ಮಾಡಬೇಕು
  • ಬಸ್ ಕವಚ ನಿರ್ಮಾಣ ಸಂಸ್ಥೆ ಸಿಂಧುತ್ವ ಪರಿಶೀಲಿಸಿದ ನಂತರವೇ ನೋಂದಣಿ ಮಾಡಬೇಕು
  • ಪ್ರತಿ ಬಸ್ಸಿನಲ್ಲೂ ಚಾವಣಿಯ ಹ್ಯಾಚ್‌ಗಳೊಂದಿಗೆ ರೇಖಾಚಿತ್ರವನ್ನು ಪ್ರಯಾಣಿಕರಿಗೆ ಓದಲು ಅನುಕೂಲವಾಗುವಂತೆ ಪ್ರದರ್ಶಿಸಬೇಕು
  • 12 ಮೀಟರ್ ಉದ್ದದ ಬಸ್ಸಿನಲ್ಲಿ ಕನಿಷ್ಠ 4 ತುರ್ತು ನಿರ್ಗಮನ ದ್ವಾರವಿರಬೇಕು, 12 ಮೀಟರ್‌ಗಿಂತ ಹೆಚ್ಚಿದ್ದರೆ ಕನಿಷ್ಠ 5 ಡೋರ್‌ಗಳಿರಬೇಕು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…

4 mins ago

ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು ; 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…

39 mins ago

ಹೊಗೇನಕಲ್‌ : ನೀರಿನ ಸೆಳೆತಕ್ಕೆ ಸಿಲುಕಿ ಓರ್ವ ಸಾವು

ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…

50 mins ago

ರಾಜ್ಯಸಭಾ ಸದಸ್ಯರಾಗಿ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ…

2 hours ago

ನಾಪತ್ತೆಯಾಗಿದ್ದ ಕೇರಳದ ವಿದ್ಯಾರ್ಥಿನಿ ಶವವಾಗಿ ಪತ್ತೆ

ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ…

2 hours ago

ಅನಾರೋಗ್ಯ ಪೀಡಿತ ಮಹಿಳೆ ಕುಟುಂಬಕ್ಕೆ ಎಚ್.ಡಿ. ಕುಮಾರಸ್ವಾಮಿ ನೆರವು

ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…

3 hours ago