ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.
ಇದನ್ನೂ ಓದಿ:-ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…