ಬೆಂಗಳೂರು : ಮಾರ್ಚ್ ಒಳಗೆ ಏಳನೇ ವೇತನ ಆಯೋಗ ವರದಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಿದ್ದಾರೆ
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ, ಏಳನೇ ಪರಿಷ್ಕೃತ ವೇತನವನ್ನು ಮಧ್ಯಂತರ ವರದಿ ಆಧಾರದಲ್ಲಿ ಜಾರಿಗೊಳಿಸುವುದಾಗಿ ಘೋಷಿಸಿದರು. ಈಗಾಗಲೇ ಏಳನೇ ವೇತನ ಆಯೋಗ ರಚನೆ ಮಾಡಿದ್ದೇವೆ. ನಿವೃತ್ತ ಮುಖ್ಯ ಕಾರ್ಯದರ್ಶಿ ದಕ್ಷ ಅಧಿಕಾರಿ ಸುಧಾಕರ್ ಅವರನ್ನು ಆಯೋಗದ ಅಧ್ಯಕ್ಷನಾಗಿ ನೇಮಕ ಮಾಡಿದ್ದೇವೆ. ಇದೇ ವರ್ಷ ಪೇ ಕಮಿಷನ್ ಜಾರಿಗೆ ತರುವ ಬದ್ಧತೆ ಇದೆ ಎಂದು ಸ್ಪಷ್ಟಪಡಿಸಿದರು. ವೇತನ ಆಯೋಗ ಮಾರ್ಚ್ ತಿಂಗಳೊಳಗೆ ಮಧ್ಯಂತರ ವರದಿ ಕೊಡಲು ಹೇಳುತ್ತೇವೆ. ಮಧ್ಯಂತರ ವರದಿ ಅಧ್ಯಯನ ನಡೆಸಿ ಅದರ ಶಿಫಾರಸುಗಳನ್ನು ಜಾರಿಗೊಳಿಸುತ್ತೇವೆ. ಮಾರ್ಚ್ ಮಧ್ಯಂತರ ವರದಿ ಆಧಾರದಲ್ಲಿ ಏಳನೇ ಪರಿಷ್ಕೃತ ವೇತನ ಜಾರಿಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಮಾರ್ಚ್ 1ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟ ಮುಷ್ಕರ
Next Article ಕಾರ್ಕಹಳ್ಳಿ ಗ್ರಾಮದ ಬಸವಪ್ಪ ಸಾವು