ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡಲಾಗಿದೆ. ಒಳಮೀಸಲಾತಿ ಅನುಷ್ಠಾನಕ್ಕೆ ಬಿಲ್ ತರಲು ಸರ್ಕಾರ ನಿರ್ಧರಿಸಿದೆ. ಸುಗ್ರೀವಾಜ್ಞೆ ಬದಲಿಗೆ ಬಿಲ್ ತರುವುದಕ್ಕೆ ಸರ್ಕಾರ ಮುಂದಾಗಿದ್ದು, ನಾಳೆ ಸಂಪುಟ ಸಭೆಯಲ್ಲಿ ವಿಧೇಯಕ ಮಂಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯ ಇತರೆ ಮುಖ್ಯಾಂಶಗಳು ಹೀಗಿವೆ….
• ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
ಇದನ್ನೂ ಓದಿ:-ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್ ಭಾಗಿಯಾಗಿರಲಿಲ್ಲ : ಹೆಗೆಡೆ ಆಪಾದನೆ
• ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
• ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು.
• ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾ ಟೀಲ್, ಪ್ರಿಯಾಂಕ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.





