Mysore
22
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

Farmers Attempt to Lay Siege to CM's House Protesting Land Acquisition

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಹಂಚಿಕೆಯ ನಿರ್ಧಾರ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಳಮೀಸಲಾತಿಯನ್ನು ಯಾರಿಗೆ ಎಷ್ಟು ಹಂಚಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಿದರು.

ಕಗ್ಗಂಟಾಗಿದ್ದ ಒಳಮೀಸಲಾತಿಗೆ ಮೂರು ಸೂತ್ರವನ್ನು ಪೈನಲ್‌ ಮಾಡಲಾಗಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15ರಷ್ಟು ಮೀಸಲಾತಿಯಲ್ಲಿ ಸಮಾನವಾಗಿ ಹಂಚಿಕೆಗೆ ತೀರ್ಮಾನಿಸಲಾಗಿದೆ. ಎಸ್‌ಸಿ ಎಡಗೈ 5.25, ಬಲಗೈ 5.25, ಎಸ್‌ಸಿ ಇತರರಿಗೆ ಶೇ.4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ.

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳ ಪೈಕಿ ಅವಕಾಶ ವಂಚಿತ ಉಪಜಾತಿಗಳಿಗೆ ಒಳಮೀಸಲು ಕಲ್ಪಿಸಬೇಕೆಂದು ದಶಕಗಳ ಕಾಲದಿಂದಲೂ ಹಕ್ಕೋತ್ತಾಯ ಹಾಗೂ ಹೋರಾಟಗಳು ನಡೆದಿದ್ದವು.

ಇದೀಗ ಈ ಸಂಬಂಧ ರಾಜ್ಯ ಸರ್ಕಾರ ಮೀಸಲಾತಿ ಹಂಚಿಕೆ ಮಾಡಿದೆ. ಎಡಗೈ 5.25, ಬಲಗೈ 5.25, ಎಸ್‌ಸಿ ಇತರರಿಗೆ ಶೇ.4.5ರಷ್ಟು ಹಂಚಿಕೆ ಮಾಡಿ ಒಳಮೀಸಲಾತಿ ಜಾರಿಗೆ ತೀರ್ಮಾನ ಕೈಗೊಂಡಿದೆ ಎಂದು ಹೇಳಿದರು.

Tags:
error: Content is protected !!