Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏನದು ಗೊತ್ತಾ?

ಬೆಂಗಳೂರು: 2026ನೇ ಮಾರ್ಚ್‌ ಮಾಹೆಯಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮತ್ತೆ ದಿನಾಂಕ ವಿಸ್ತರಣೆ ಮಾಡಿದ್ದು, ನವೆಂಬರ್.‌29ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನೋಂದಾಯಿಸಿಕೊಳ್ಳಬಹುದಾಗಿದೆ.

ಇದನ್ನು ಓದಿ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಪಡಿಸಲು ಕಸರತ್ತು 

ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ರಾಜ್ಯದ ಕೆಲವು ಶಾಲೆಗಳು ಮತ್ತು ಪೋಷಕರಿಂದ ನೋಂದಣಿಗೆ ಕಾಲಾವಕಾಶ ವಿಸ್ತರಣೆಗೆ ಮನವಿ ಬಂದ ಹಿನ್ನೆಲೆಯಲ್ಲಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಇದು ಕೊನೆಯ ಅವಕಾಶವಾಗಿದೆ ಎಂದು ಮಂಡಳಿ ತಿಳಿಸಿದೆ.

Tags:
error: Content is protected !!