ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ನೀಡಲಾಗುತ್ತಿದ್ದ ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್.27ರಿಂದ ಡಿಸೆಂಬರ್.12ರವರೆಗೆ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ನವೆಂಬರ್.27ರಿಂದ ಡಿಸೆಂಬರ್.12ರವರೆಗೆ ಸರ್ಪ ಸಂಸ್ಕಾರ ಸೇವೆ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಇತರೆ ಸೇವೆಗಳು ಎಂದಿನಂತೆ ನಡೆಯಲಿವೆ ಎಂದು ಹೇಳಲಾಗಿದೆ.
ಚಂಪಾಷಷ್ಠಿಯ ದಿನ ಆಶ್ಲೇಷ ಬಲಿ ಮತ್ತು ನಾಗ ಪ್ರತಿಷ್ಠೆ ನೆರವೇರಿಸುವುದಿಲ್ಲ. ಲಕ್ಷ ದೀಪೋತ್ಸವ, ಚೌತಿ, ಪಂಚಮಿ ಚಂಪಾಷಷ್ಠಿ ದಿನ ಮತ್ತು ಕೊಪ್ಪರಿಗೆ ಇಳಿಯುವ ಮಹಾ ಸಂಪ್ರೋಕ್ಷಣೆಯ ದಿನ ಪಂಚಾಮೃತ ಅಭಿಷೇಕ ಇರುವುದಿಲ್ಲ.
ಇನ್ನು ನವೆಂಬರ್.26ರಂದು ಬೆಳಿಗ್ಗೆಯಿಂದ ಮಧ್ಯಾಹ್ನ 2ರವರೆಗೆ ಭಕ್ತರಿಗೆ ದೇವರ ದರ್ಶನ ಸೇವೆ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಮಾಹಿತಿ ನೀಡಲಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…