Mysore
26
scattered clouds

Social Media

ಬುಧವಾರ, 15 ಜನವರಿ 2025
Light
Dark

ಇನ್ನಷ್ಟು ಜನ ನಮ್ಮ ಪಕ್ಷವನ್ನು ಸೇರಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೋಲಾರ : ಕೋಲಾರದಿಂದ ಇಂದು ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು, ಮಧ್ಯಮ ವರ್ಗದವರು ನಮ್ಮ ಪರವಾಗಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಅಧಿಕ ಅಂತರದಿಂದ ಗೆಲ್ಲಲಿದ್ದಾರೆ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಇಂದು ಮುಳಬಾಗಿಲು ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಡಾ. ಕೆ.ವಿ ಗೌತಮ್ ಅವರ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, 5300 ಕೋಟಿ ಕೊಡುವುದಾಗಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಹೇಳಿದ್ದರು. ಒಂದು ರೂಪಾಯಿಯನ್ನಾದರೂ ಕೊಟ್ಟಿದ್ದಾರೆಯೇ? 15 ನೇ ಹಣಕಾಸು ಯೋಜನೆಯು 5495 ಕೋಟಿ ಕೊಡುವುದಾಗಿ ಹೇಳಿ ಕೊಟ್ಟಿಲ್ಲಾ. ಪೇರಿಫೆರಲ್ ರಿಂಗ್ ರೋಡ್ ಹಾಗೂ ಕೆರೆಗಳ ಅಭವೃದ್ಧಿಗೆ ತಲಾ 3000 ಕೋಟಿ ರೂ.ಕೊಡುವುದಾಗಿ ಹೇಳಿದ್ದರು. ಕೊಟ್ಟರೇ? 15 ಲಕ್ಷ ರೂ ವಿದೇಶಗಳಿಂದ ತಂದು ಪ್ರತಿಯೊಬ್ಬರಿಗೂ ಕೊಟ್ಟರೇ?2 ಕೋಟಿ ಉದ್ಯೋಗ ಪ್ರತಿ ವರ್ಷ ಸೃಷ್ಟಿಸುವುದಾಗಿ ಹೇಳಿದ್ದರು. ರೈತರ ಆದಾಯ ದ್ವಿಗುಣ ಮಾಡುವುದೆಂದು ಹೇಳಿದ್ದರು ಮಾಡಿದರೆ ಅಚ್ಚೇ ದಿನ್ ಆಯೇಗಾ, ಎಂದರು, ಬೆಲೆ ಕಡಿಮೆ ಮಾಡುವುದಾಗಿ ಹೇಳಿದರು ಮಾಡಿದರೆ. ಬಿಜೆಪಿಗೆ ಏತಕ್ಕಾಗಿ ಮತ ನೀಡಬೇಕು ಎಂದು ಮುಖ್ಯಮಂತ್ರಿಗಳು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದರು.

ಲೋಕಸಭಾ ಚುನಾವಣೆಯ ನಂತರ ಸರ್ಕಾರ ಬಿದ್ದು ಹೋಗಲಿದೆ ಎಂದು ಬಿಜೆಪಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ 136 ಸ್ಥಾನಗಳನ್ನು ಗೆದ್ದು 43% ಮತಗಳನ್ನು ಕಾಂಗ್ರೆಸ್ ಗಳಿಸಿದೆ. ಬಿಜೆಪಿ 64 ಗೆದ್ದಿದ್ದಾರೆ. ಇನ್ನಷ್ಟು ಜನ ನಮ್ಮ ಪಕ್ಷವನ್ನು ಸೇರಲಿದ್ದಾರೆ. ಸರ್ಕಾರ ಬಿದ್ದುಹೋಗುವ ಪ್ರಶ್ನೆ ಉದ್ಭಿಸುವುದಿಲ್ಲ ಎಂದರು. ಐದು ವರ್ಷಗಳೂ ಕೂಡ ಗ್ಯಾರಂಟಿಗಳು ಜಾರಿಯಾಗಲಿವೆ ಎಂದರು.

Tags: