ರಾಜ್ಯ

ಸಾಲುಮರದ ತಿಮ್ಮಕ್ಕ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ ತಲಾ 114 ಸಸಿ ನೆಟ್ಟು ಪೋಷಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: 114 ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿ ನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ ಎಂದರು.

ಇದನ್ನು ಓದಿ: ಕಲಾಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ : ಈಶ್ವರ ಖಂಡ್ರೆ

ಇಲಾಖೆ ಅವರನ್ನು ಪರಿಸರ ರಾಯಭಾರಿಯಾಗಿ ಪುರಸ್ಕರಿಸಿತ್ತು. ಅಜ್ಜಿಯ ಪ್ರೇರಣೆಯಿಂದ ನೂರಾರು ಜನರು ತಮ್ಮ ಕೈಲಾದಷ್ಟು ಸಸಿ ನೆಟ್ಟು ಪೋಷಿಸುತ್ತಿದ್ದಾರೆ. ಲಕ್ಷಾಂತರ ಪರಿಸರ ಪ್ರೇಮಿಗಳಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಿದೆ ಎಂದು ದುಃಖ ವ್ಯಕ್ತಪಡಿಸಿದರು. ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಈಶ್ವರ ಬಿ ಖಂಡ್ರೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago