Mysore
23
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 297 ಹೊಸ ಪ್ರಕರಣ ಪತ್ತೆ, 320 ಮಂದಿ ಡಿಸ್‌ಚಾರ್ಜ್‌

ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 297 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 320 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1136 ಇದೆ. ಕೊನೆಯ 24 ಗಂಟೆಗಳಲ್ಲಿ 7356 ಟೆಸ್ಟ್‌ಗಳು ನಡೆದಿವೆ, 6548 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 808 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 4.03% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಒಟ್ಟು 1136 ಸಕ್ರಿಯ ಪ್ರಕರಣಗಳ ಪೈಕಿ 1070 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 66 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 42 ಸೋಂಕಿತರು ಜನರಲ್‌ ಬೆಡ್‌ನಲ್ಲಿದ್ದು, 1 ಸೋಂಕಿತ ಆಮ್ಲಜನಕ ಸಪೋರ್ಟ್‌ ಐಸೋಲೇಷನ್‌ ಬೆಡ್‌ನಲ್ಲಿದ್ದಾರೆ, 18 ಮಂದಿ ಐಸಿಯುನಲ್ಲಿದ್ದಾರೆ ಹಾಗೂ 5 ಸೋಂಕಿತರು ವೆಂಟಿಲೇಟರ್‌ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 26, ಮಂಡ್ಯದಲ್ಲಿ 6, ಕೊಡಗಿನಲ್ಲಿ 1 ಹಾಗೂ ಚಾಮರಾಜನಗರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 93, ಮಂಡ್ಯದಲ್ಲಿ 30, ಕೊಡಗಿನಲ್ಲಿ 3 ಹಾಗೂ ಚಾಮರಾಜನಗರದಲ್ಲಿ 15 ಸಕ್ರಿಯ ಪ್ರಕರಣಗಳಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!