ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 297 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 320 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1136 ಇದೆ. ಕೊನೆಯ 24 ಗಂಟೆಗಳಲ್ಲಿ 7356 ಟೆಸ್ಟ್‌ಗಳು ನಡೆದಿವೆ, 6548 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 808 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 4.03% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಒಟ್ಟು 1136 ಸಕ್ರಿಯ ಪ್ರಕರಣಗಳ ಪೈಕಿ 1070 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 66 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 42 ಸೋಂಕಿತರು ಜನರಲ್ ಬೆಡ್‌ನಲ್ಲಿದ್ದು, 1 ಸೋಂಕಿತ ಆಮ್ಲಜನಕ ಸಪೋರ್ಟ್ ಐಸೋಲೇಷನ್ ಬೆಡ್‌ನಲ್ಲಿದ್ದಾರೆ, 18 ಮಂದಿ ಐಸಿಯುನಲ್ಲಿದ್ದಾರೆ ಹಾಗೂ 5 ಸೋಂಕಿತರು ವೆಂಟಿಲೇಟರ್ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 26, ಮಂಡ್ಯದಲ್ಲಿ 6, ಕೊಡಗಿನಲ್ಲಿ 1 ಹಾಗೂ ಚಾಮರಾಜನಗರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 93, ಮಂಡ್ಯದಲ್ಲಿ 30, ಕೊಡಗಿನಲ್ಲಿ 3 ಹಾಗೂ ಚಾಮರಾಜನಗರದಲ್ಲಿ 15 ಸಕ್ರಿಯ ಪ್ರಕರಣಗಳಿವೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…