ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 298 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 229 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240 ಇದೆ.
ಕೊನೆಯ 24 ಗಂಟೆಗಳಲ್ಲಿ 7791 ಟೆಸ್ಟ್‌ಗಳು ನಡೆದಿವೆ, 6900 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 891 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.82% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 60 ವರ್ಷದ ಮಹಿಳೆ, ಬೆಂಗಳೂರಿನಲ್ಲಿ 82 ವರ್ಷದ & 64 ವರ್ಷದ ಹಾಗೂ ಧಾರವಾಡದಲ್ಲಿ 63 ವರ್ಷದ ಮೃತಪಟ್ಟಿದ್ದಾರೆ.
ಒಟ್ಟು 1240 ಸಕ್ರಿಯ ಪ್ರಕರಣಗಳ ಪೈಕಿ 1168 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 72 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 51 ಸೋಂಕಿತರು ಜನರಲ್ ಬೆಡ್‌ನಲ್ಲಿದ್ದು, 9 ಸೋಂಕಿತರು ಆಮ್ಲಜನಕ ಸಪೋರ್ಟ್ ಐಸೋಲೇಷನ್ ಬೆಡ್‌ನಲ್ಲಿದ್ದಾರೆ, 9 ಮಂದಿ ಐಸಿಯುನಲ್ಲಿದ್ದಾರೆ ಹಾಗೂ 3 ಸೋಂಕಿತರು ವೆಂಟಿಲೇಟರ್ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 18, ಮಂಡ್ಯದಲ್ಲಿ 11, ಕೊಡಗಿನಲ್ಲಿ 2 ಹಾಗೂ ಚಾಮರಾಜನಗರದಲ್ಲಿ 8 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 86, ಮಂಡ್ಯದಲ್ಲಿ 27, ಕೊಡಗಿನಲ್ಲಿ 2 ಹಾಗೂ ಚಾಮರಾಜನಗರದಲ್ಲಿ 17 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…