ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಏರೋ ಇಂಡಿಯಾ 2025ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧಿಕೃತ ಚಾಲನೆ ನೀಡಿದರು.
ಇಲ್ಲಿನ ಏರ್‌ಶೋ ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರ್‌ಶೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಏರೋ ಇಂಡಿಯಾ 2025ಕ್ಕೆ ಅಧಿಕೃತ ಚಾಲನೆ ನೀಡಿದ ಬಳಿಕ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಅಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಇಲ್ಲಿ ಏರೋ ಇಂಡಿಯಾ ಮಹಾಕುಂಭ ನಡೆಯುತ್ತಿದೆ. ಒಂದು ಕಡೆ ಪರಂಪರೆ, ಸಂಸ್ಕೃತಿ ಮಹಾಕುಂಭ ಆಗುತ್ತಿದೆ. ಇನ್ನೊಂದು ಕಡೆ ಅತ್ಯಾಧುನಿಕ, ತಂತ್ರಜ್ಞಾನದ ಯುದ್ಧೋಪಕರಣ, ವಿಮಾನಗಳ ಮಹಾಕುಂಭ ನಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ಹೊಸ ಸವಾಲುಗಳಿಗೆ ಉತ್ತರ ಹುಡುಕುವ ಕಾರ್ಯ ಮಾಡಬೇಕಿದೆ. ಶಾಂತಿ, ಶಕ್ತಿ ನಮ್ಮ ಮಂತ್ರಬಲ ಆಗಬೇಕಿದೆ. ನಾವು ಇನ್ನಷ್ಟು ಬಲಾಢ್ಯರಾಗಿ ವಿಶ್ವದಲ್ಲಿ ನಮ್ಮ ಸ್ಥಾನ ಪ್ರದರ್ಶಿಸಬೇಕಾಗಿದೆ. ಅದಕ್ಕಾಗಿಯೇ ಈ ಬಾರಿ ಬಜೆಟ್‌ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 1,080 ಕೋಟಿ ರೂ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…