ಬೆಂಗಳೂರು: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಹುತಾತ್ಮ ಅರ್ಜುನ ಆನೆಯ ಸ್ಮಾರಕ ಸಂಪೂರ್ಣ ಸಿದ್ಧವಾಗಿದ್ದು, ಹಾಸನ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟಿಸಲಾಗುವುದು ಎಂದರು.
ಹುತಾತ್ಮ ಅರ್ಜುನನ ಸ್ಮಾರಕವನ್ನು ಡಿಸೆಂಬರ್.4ರ ಪ್ರಥಮ ಪುಣ್ಯ ತಿಥಿಯೊಳಗಾಗಿ ನೆರವೇರಿಸುವ ಉದ್ದೇಶ ಇತ್ತು. ಆದರೆ, ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಸ್ಮಾರಕ ಅರಣ್ಯ ಪ್ರದೇಶದಲ್ಲಿದ್ದು, ಸಾರ್ವಜನಿಕರು ಸ್ಮಾರಕ ದರ್ಶನಕ್ಕೆ ಬರಲು ತೊಡಕಾಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ ಹಿನ್ನೆಲೆಯಲ್ಲಿ ಬಳ್ಳೆಯಲ್ಲೂ ಕೂಡ ಸ್ಮಾರಕ ನಿರ್ಮಿಸಲಾಗಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರದಲ್ಲಿ ಆ ಸ್ಮಾರಕವನ್ನೂ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದರು.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…