ಬೆಂಗಳೂರು: ಜ.೨೨ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಎಲ್ಲ ಸಚಿವರನ್ನು ಉತ್ತರ ಪ್ರದೇಶ ಕೃಷಿ ಸಚಿವ ಸೂರ್ಯಪ್ರತಾಪ್ ಸಾಹಿ ಆಹ್ವಾನ ನೀಡಿದರು.
ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ನಡೆದ ‘ಸಿರಿಧಾನ್ಯ ಮೇಳ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೂರ್ಯಪ್ರತಾಪ್ ಸಾಹಿ ಅವರು ಸಿದ್ದರಾಮಯ್ಯ ಹಾಗೂ ಸಂಪುಟ ಸಚಿವರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನಿಸಿದ್ದಾರೆ.
ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಆಗಮಿಸುವ ಮೂಲಕ ಸಾಕ್ಷಿಯಾಗಬೇಕು ಎಂದು ಸಚಿವ ಸಾಹಿ ಮನವಿ ಮಾಡಿದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಮರಣಿಕೆ ನೀಡಿ ಶಾಲು ಹಾಕಿ ಗೌರವಿಸಿದರು. ಈ ವೇಳೆ ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಸಚಿವರು, ಶಾಸಕರು ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ್ ರವಿಕುಮಾರ್…
ಬೆಂಗಳೂರು: ಕರ್ನಾಟಕ ಆಡಳಿತ ಸೇವೆ( ಕೆಎಎಸ್)ಯ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ…
ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ…
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕರೀಘಟ್ಟ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ಇಂದು ವೈಭವದಿಂದ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತ ಮುತ್ತ ಇರುವ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ನಾಡಿನ ಸುಪ್ರಸಿದ್ಧ ಶ್ರೀ ಕಪ್ಪಡಿ ಜಾತ್ರೆಯಲ್ಲಿ ೨ನೇ ಬಾರಿ ೨೦ ಜೊತೆ…